ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸುವಲ್ಲಿ ವಿಜಯಪುರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ ಕಲಬುರಗಿ ದ್ವಿತೀಯ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.
“ವಿಜಯಪುರ ಜಿಲ್ಲೆಯಾದ್ಯಂತ ನೊಂದಾಯಿಸಿಕೊಂಡಿದ್ದ 45,843 ರೈತರ ಪೈಕಿ 39,537 ರೈತರಿಂದ ಈವರೆಗೆ ಸುಮಾರು 6.56 ಲಕ್ಷ ಕ್ವಿಂಟಲ್ ತೊಗರಿಯನ್ನು ಖರೀದಿಸಲಾಗಿದೆ. ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 9.2 ಲಕ್ಷ ಕ್ವಿಂಟಾಲ್ ಪ್ರಮಾಣಕ್ಕೆ 45,843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಲ್ ತೊಗರಿಗೆ ರೂ.7,550 ರಂತೆ ನಾಫೆಡ್ ಸಂಸ್ಥೆಯಿಂದ 22,030 ರೈತರಿಗೆ 270 ಕೋಟಿ ರೂ.ಗಳನ್ನು ಹಾಗೂ 450 ರೂ.ರಂತೆ ರಾಜ್ಯ ಪ್ರೊತ್ಸಾಹ ಧನವನ್ನು ರೂ.10.44 ಕೋಟಿಗಳನ್ನು 14,613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದೆ. ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುತ್ತಿದೆ”
ತೊಗರಿ ಖರೀದಿ ಪ್ರಕ್ರಿಯೆಯು ಮೇ.31ರವರೆಗೆ ಚಾಲ್ತಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ತೊಗರಿ ಬೆಳೆದಿರುವ ರೈತರು ತಮ್ಮ ಸಮೀಪದ ಪಿಎಸಿಎಸ್, ಟಿಎಪಿಸಿಎಂಎಸ್, ಎಫ್‍ಪಿಓ ಸಂಘಗಳಲ್ಲಿ ತೊಗರಿ ಮಾರಾಟ ಮಾಡಿ ಬೆಂಬಲ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ವಿಜಯಪುರ | ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಉಪಧನ ನೀಡುವಂತೆ ಸರ್ಕಾರಕ್ಕೆ ಮನವಿ