ಗೃಹ ಸಚಿವ ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ. ತುಮಕೂರಿನ ಎಸ್ಎಸ್ಐಟಿ ಹಾಗೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಮೇ 21ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎರಡೂ ಕಡೆ ಪ್ರತ್ಯೇಕವಾಗಿ ಏಕಕಾಲದಲ್ಲಿ ದಾಳಿಯಾಗಿದೆ ಎಂದು ವರದಿಯಾಗಿದೆ. ಇನ್ನು 2019ರಲ್ಲಿಯೂ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೇಲೆ ಆದಾಯ ತೆರಿಗೆಯ ದಾಳಿಯಾಗಿತ್ತು.
ಇದನ್ನು ಓದಿದ್ದೀರಾ? ಬೇಲಿಯೇ ಎದ್ದು ಹೊಲ ಮೇಯ್ದಾಗ: ಲಂಚ ಪಡೆದ ಆರೋಪದಲ್ಲಿ ಇಡಿ ಮೇಲೆ ಸಿಬಿಐ ದಾಳಿ
ಈ ಹಿಂದೆ ನಡೆದ ದಾಳಿ ವೇಳೆ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಮತ್ತೆ ಎರಡು ಸಂಸ್ಥೆಗಳ ಮೇಲೆ ಪ್ರತ್ಯೇಕವಾಗಿದ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
