ಕನ್ನಡ ಮಾತನಾಡಲು ನಿರಾಕರಿಸಿದ ಎಸ್‌ಬಿಐ ಮ್ಯಾನೇಜರ್: ಸಿಎಂ ಸಿದ್ದರಾಮಯ್ಯ ತರಾಟೆ

Date:

Advertisements

“ನಾನು ಎಂದಿಗೂ ಕನ್ನಡದಲ್ಲಿ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ” ಎಂದು ದರ್ಪದಿಂದ ಹೇಳಿರುವ ಎಸ್‌ಬಿಐ ಮ್ಯಾನೇಜರ್‌ನ ಈ ವರ್ತನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಜೊತೆಗೆ ಎಸ್‌ಬಿಐ ವ್ಯವಸ್ಥಾಪಕಿ ವಿರುದ್ಧ ಎಸ್‌ಬಿಐ ಕ್ರಮಕೈಗೊಂಡಿರುವುದನ್ನು ಪ್ರಶಂಸಿದ್ದಾರೆ.

ಕನ್ನಡದಲ್ಲಿ ವ್ಯವಹರಿಸುವಂತೆ ಗ್ರಾಹಕರು ಹೇಳಿದಾಗ ನಾನು ಎಂದಿಗೂ ಕನ್ನಡ ಮಾತನಾಡುವುದಿಲ್ಲ ಹಿಂದಿ ಮಾತನಾಡುವೆ ಎಂದು ಎಸ್‌ಬಿಐ ಬ್ರ್ಯಾಂಚ್ ಒಂದರ ಮ್ಯಾನೇಜರ್ ಹೇಳಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಇದನ್ನು ಓದಿದ್ದೀರಾ? ಎಂದಿಗೂ ಕನ್ನಡ ಮಾತಾಡಲ್ಲ, ಹಿಂದಿಯಲ್ಲೇ ಮಾತಾಡ್ತೀನಿ: ಎಸ್‌ಬಿಐ ಮ್ಯಾನೇಜರ್ ವಿಡಿಯೋ ವೈರಲ್, ತೀವ್ರ ಟೀಕೆ

Advertisements

“ಚಂದಾಪುರದ ಸೂರ್ಯಸಿಟಿಯ ಎಸ್‌ಬಿಐ ಬ್ರ್ಯಾಂಚ್ ಮ್ಯಾನೇಜರ್ ಕನ್ನಡ ಮಾತಾಡುವುದಿಲ್ಲ ಎಂದು ಧಿಮಾಕು ತೋರಿಸಿದ್ದಾರೆ. ಕೂಡಲೇ ಈಕೆಯ ಮೇಲೆ ಕ್ರಮ ಆಗಬೇಕು” ಎಂದು ಕನ್ನಡಿಗರು ಆಗ್ರಹಿಸಿದ್ದರು. ಹಾಗೆಯೇ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಇಂದು ಪ್ರತ್ಯೇಕವಾಗಿ ಎರಡು ಸ್ಥಳಗಳಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು. ಇವೆಲ್ಲವುದರ ನಡುವೆ ಎಸ್‌ಬಿಐ ವ್ಯವಸ್ಥಾಪಕಿಯ ವರ್ಗಾವಣೆ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡನೀಯ” ಎಂದು ಹೇಳಿದ್ದಾರೆ.

“ಅಧಿಕಾರಿಯನ್ನು ವರ್ಗಾವಣೆ ಮಾಡುವ ತ್ವರಿತ ಕ್ರಮವನ್ನು ಎಸ್‌ಬಿಐ ಕೈಗೊಂಡಿದ್ದು ಅದನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯ ಈಗ ಇತ್ಯರ್ಥಕ್ಕೆ ಬಂದಿದೆ ಎಂದು ಪರಿಗಣಿಸಬಹುದು. ಆದರೆ ಇಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡುವ ಪ್ರಯತ್ನವನ್ನು ಮಾಡಬೇಕು” ಎಂದು ತಿಳಿಸಿದ್ದಾರೆ.

“ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ನಾನು ಹಣಕಾಸು ಸಚಿವಾಲಯ ಮತ್ತು ಹಣಕಾಸು ಸೇವೆಗಳ ಇಲಾಖೆಗೆ ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು” ಎಂದು ಮುಖ್ಯಮಂತ್ರಿಗಳು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X