ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆಪರೇಷನ್ ಸಿಂಧೂರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಲಿ ಖಾನ್ ಮಹ್ಮದಾಬಾದ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್ ಮಾಡಿದ ಅಶೋಕ ವಿವಿಯ ಪ್ರಾಧ್ಯಾಪಕ ಅಲಿ ಖಾನ್ ಯಾರು ಗೊತ್ತೆ?
ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಲಿ ಖಾನ್ ಮಹ್ಮದಾಬಾದ್ ಅವರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ. ಇಂದು ವಿಚಾರಣೆ ನಡೆಸಿ ಮಧ್ಯಂತರ ಜಾಮೀನು ನೀಡಿದೆ.
FB post on Operation Sindoor: Supreme Court grants interim bail to Ali Khan Mahmudabad but refuses to stay FIR.
— Bar and Bench (@barandbench) May 21, 2025
Read details of the Order: https://t.co/JaEJbgQng1 #SupremeCourtofIndia #Facebook #OperationSindoor #AliKhanMahmudabad #BarandBench pic.twitter.com/12h8C6DQev
ಜೊತೆಗೆ ಈ ವಿಚಾರದಲ್ಲಿ ತನಿಖೆಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಹರಿಯಾಣ ಅಥವಾ ದೆಹಲಿಗೆ ಸೇರದ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು 24 ಗಂಟೆಗಳ ಒಳಗೆ ರಚಿಸುವಂತೆ ನ್ಯಾಯಾಲಯವು ಹರಿಯಾಣ ಡಿಜಿಪಿಗೆ ನಿರ್ದೇಶನ ನೀಡಿದೆ. ಹಾಗೆಯೇ ಎಸ್‌ಐಟಿಯಲ್ಲಿ ಒಬ್ಬರಾದರೂ ಮಹಿಳಾ ಅಧಿಕಾರಿ ಇರಬೇಕು ಎಂದು ಹೇಳಿದೆ.
ಸದ್ಯ ಪ್ರಾಧ್ಯಾಪಕರ ಬಂಧನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಮತ್ತು ಎಸ್‌ಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಲಿ ಖಾನ್ ಅವರ ಬಂಧನವನ್ನು ಟೀಕಿಸಿದ್ದಾರೆ. ಹಾಗೆಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಚಿವ ವಿಜಯ್ ಶಾ ಬಂಧನವೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.
