ಮಳೆ ನೀರು ಕಲುಷಿತಗೊಳ್ಳುವ ಸಾಧ್ಯತೆ, ಮುಂಜಾಗ್ರತೆ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

Date:

Advertisements

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ, ಆದಾಗ್ಯೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ನೀರನ್ನು ಕಾದಾರಿಸಿ ಕುಡಿಯುವುದು ಕ್ಷೇಮ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹಬ್ಬಬಹುದಾಗಿದೆ, ಈ ಬಗ್ಗೆಯೂ ಗ್ರಾಮೀಣವಾಸಿಗಳು ಜಾಗ್ರತೆಯಿಂದ ಇರಬೇಕು, ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇರಿಸಿಕೊಳ್ಳಬೇಕು. ಈ ಸಂಬಂಧದಲ್ಲಿ ಪಂಚಾಯತ್‌ ರಾಜ್‌ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದು, ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚಿಸಲು ನಿರ್ದೇಶಿಸಿದ್ದಾರೆ.

Advertisements

ನೀರಿನ ಮೂಲಗಳಲ್ಲಿ ಹಾಗೂ ನೀರು ಸರಬರಾಜು ಕೊಳವೆ ಮಾರ್ಗಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಹಾಗೂ ಕಲುಷಿತಗೊಳ್ಳದಂತೆ ತಡೆಯಲು ಅಧಿಕಾರಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ನೀರು ಮಾದರಿ ಪರೀಕ್ಷೆ ಮಾಡುವ ಪ್ರಯೋಗಾಲಯಗಳನ್ನು ಸಮರ್ಪಕವಾಗಿ ನಿರ್ವಹಿಸುವತ್ತ ಗಮನ ಹರಿಸಬೇಕೆಂದು ಸಚಿವರು ನಿರ್ದೇಶನ ನೀಡಿದ್ದಾರೆ. ನೀರು ಮಾದರಿ ಪರೀಕ್ಷೆಯಲ್ಲಿ ಅನುಮಾನ ಬಂದಲ್ಲಿ ತಕ್ಷಣ ಅಂತಹ ಪ್ರದೇಶಗಳಿಗೆ ಕೊಳವೆ ನೀರು ಪೂರೈಕೆ ನಿಲ್ಲಿಸಿ, ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕೆಂದು ಸಚಿವರು ಆದೇಶಿಸಿದ್ದಾರೆ.

ನೀರಿನ ಮೂಲಗಳನ್ನು ಸಂರಕ್ಷಿಸುವುದು ಅತ್ಯಂತ ಮುಖ್ಯವಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕೆಂದು ಸಚಿವರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X