ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ

Date:

Advertisements

ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರಿಸಿದರು.

ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಮತ್ತು ದೇವ ಸೇರಿದಂತೆ ನಾಲ್ಕು ಕುಮ್ಕಿ ಆನೆಗಳನ್ನು ಇಂದು ವಿಧ್ಯುಕ್ತವಾಗಿ ಹಸ್ತಾಂತರಿಸಲಾಯಿತು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ” ಎಂದರು.

Advertisements

“ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ” ಎಂದು ಹೇಳಿದರು.

ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆನೆಗಳಿಗೆ ಪೂಜೆ ಸಲ್ಲಿಸಿದರು. ಸಚಿವರುಗಳಾದ ಕೆ.ಜೆ. ಜಾರ್ಜ್, ಸುಧಾಕರ್, ಬೈರತಿ ಸುರೇಶ್, ರಹೀಂಖಾನ್, ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.

ಆಂಧ್ರಪ್ರದೇಶಕ್ಕೆ ನೀಡಲಾದ ಆನೆಗಳ ವಿವರ

  1. ಕೃಷ್ಣ 15 ವರ್ಷ. 2022ರಲ್ಲಿ ಚಿಕ್ಕಮಗಳೂರಿನಲ್ಲಿ ಈ ಆನೆ ಸೆರೆ ಹಿಡಿಯಲಾಗಿತ್ತು.
  2. ಶಿವಮೊಗ್ಗ ಅಭಿಮನ್ಯು- 14 ವರ್ಷ 2023ರಲ್ಲಿ ಹೊನ್ನಾಳಿಯಲ್ಲಿ ಸೆರೆ ಹಿಡಿಯಲಾದ ಆನೆ.
  3. ದೇವ -39 ವರ್ಷ ಕುಶಾಲನಗರದಲ್ಲಿ 2019ರಲ್ಲಿ ಸೆರೆ ಹಿಡಿದ ಆನೆ.
  4. ರಂಜನ್ ದುಬಾರೆ ಶಿಬಿರದಲ್ಲೇ ಜನಿಸಿದ ಆನೆ. ವಯಸ್ಸು 26 ವರ್ಷ.
    ಆಂಧ್ರಪ್ರದೇಶ ಒಟ್ಟು 8 ಆನೆ ನೀಡುವಂತೆ ಮನವಿ ಮಾಡಿದ್ದು, ಕರ್ನಾಟಕ 6 ಆನೆ ನೀಡಲು ಸಮ್ಮತಿಸಿದೆ. ಇಂದಿನ ಕಾರ್ಯಕ್ರಮದಲ್ಲಿ ಸದ್ಯ ನಾಲ್ಕನ್ನಷ್ಟೇ ಹಸ್ತಾಂತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೆರಡು ಆನೆಗಳನ್ನು ನೀಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X