ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸತ್ಯಭಾಮ ಸಿ ಅವರು ಬುಧವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು, ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಪೂರ್ಣಿಮಾ ಅವರು ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಹೂಗುಚ್ಛ ನೀಡಿ ನೂತನ ಜಿಲ್ಲಾಧಿಕಾರಿಗೆ ಶುಭ ಕೋರಿದರು.
ಹಾಸನ ಜಿಲ್ಲಾಧಿಕಾರಿಗಳಾಗಿದ್ದ ಅರ್ಚನ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ಸತ್ಯಭಾಮ ಸಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ಈ ಹಿಂದೆ, ಸತ್ಯಭಾಮ ಅವರು ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅತಿಸಣ್ಣ ಮತ್ತು ಸಣ್ಣ ಉದ್ದಿಮೆಗಳ ವಿಭಾಗದ ನಿರ್ದೇಶಕರಾಗಿದ್ದರು.