ಮುಂಗಾರು ಬಿತ್ತನೆ ಆರಂಭ ಆಗುತ್ತಿದ್ದು, ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗುತ್ತಿದೆ. ಕೂಡಲೇ ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಮುಂಗಾರು ಹಂಗಾಮಿಗೆ ಸಮರ್ಪಕ ರಸಗೊಬ್ಬರ ವಿತರಿಸಲು ಜಿಲ್ಲಾಧಿಕಾರಿ ಅನ್ನಪೂರ್ಣ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶರಣು ಗೋಡಿ ಮಾತನಾಡಿ, “ಜಿಲ್ಲೆಯಲ್ಲಿ ಕಳೆದ ನಾಲೈದು ವರ್ಷಗಳಿಂದ ಅತಿವೃಷ್ಟಿ ಅನಾವೃಷ್ಟಿಯಿಂದ ರೈತ ಬೆಳೆದ ಬೆಳೆಗಳು ಒಂದಿಲ್ಲೊಂದು ಕಾರಣದಿಂದ ಬೆಳೆಗಳು ಕೈಗೆಟಗುತ್ತಿಲ್ಲ. ಆದ್ದರಿಂದ ಈ ವರ್ಷ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ. ಮುಂಗಾರು ಹಂಗಾಮಿನ ಬಿತ್ತನೆ ಆರಂಭ ಆಗಿದ್ದು, ರೈತರಿಗೆ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಉಂಟಾಗಿದೆ. ರೈತರು ಗೊಬ್ಬರದ ಅಂಗಡಿಗೆ ಡಿಎಪಿ ಗೊಬ್ಬರವನ್ನು ಕೇಳಲು ಹೋದಾಗ ‘ಯೂರಿಯಾ ಗೊಬ್ಬರದ ಜೊತೆ ಲಿಂಕ ಆಗಿದ್ದು, ಕೀರ್ತಿ ಗೊಬ್ಬರ ತೆಗೆದುಕೋಳ್ಳಬೇಕು’ ಎಂದು ಗೊಬ್ಬರ ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಅಂತಹ ರಸಗೊಬ್ಬರ ವ್ಯಾಪಾರಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಲ್ಲಬೇಕು” ಎಂದು ಒತ್ತಾಯಿಸಿದರು.
“ಜಿಲ್ಲೆಯ ರೈತರಿಗೆ ಮುಂಗಾರು ಹಂಗಾಮಿನ ಬಿತ್ತನೆಗೆ ಯೂರಿಯಾ, ಡಿಎಪಿ 10-26-26, 10-20, 20-20-013 ಈ ಎಲ್ಲಾ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ, ಜಿಲ್ಲೆಯಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ
ಮನವಿ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಆರ್ ಎಮ್ ಬೆಟಗೇರಿ, ಮುತ್ತಣ್ಣ ಇನ್ನೂ ಅನೇಕರು ಉಪಸ್ಥಿತರಿದ್ದರು.
