ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ರಾಹುಲ್ ಗಾಂಧಿ ಅವರನ್ನು ಸಂಸತ್‌ನಿಂದ ಅನರ್ಹಗೊಳಿಸಿರುವ ಆದೇಶವನ್ನು ರದ್ದು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ. ಮೋದಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ಸಮದ್, ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ಶ್ರೇಯಸ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಯುಮ್ ಚಂದ್ರಶೇಖರ್, ಲಕ್ಷ್ಮಣ, ಮುಜಾಹಿದ್, ಕೆಪಿಸಿಸಿ ಸದಸ್ಯ ಸಲೀಂ, ಮಹಿಳಾ ಕಾಂಗ್ರೆಸ್‌ನ ತಾರ ಚಂದನ್, ರಾಮಚಂದ್ರ, ರಂಜಿತ್ ಇರ್ಫಾನ್, ಹಾದಿ, ಕಡಕಡಿ ಪೀರ್ ಸಾಬ್ ನಾಗರಾಜ್ ಇನ್ನಿತರರು ಇದ್ದರು.
ಮೋದಿ ಉಪನಾಮದ ಕುರಿತು ಟೀಕಿಸಿದ್ದ ರಾಹುಲ್‌ಗಾಂಧಿ ಅವರಿಗೆ ಗುಜರಾತ್‌ನ ಸೆಷನ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ, ರಾಹುಲ್‌ಗಾಂಧಿ ಅವರ ಸಂಸತ್ ಸದಸ್ಯತ್ವವನ್ನೂ ಅನರ್ಹಗೊಳಿಸಿ ಲೋಕಸಭಾ ಸ್ಪೀಕರ್ ಆದೇಶಿಸಿದ್ದರು.