ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕ

Date:

Advertisements

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ.

ಹಾಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇಂದು ಬೆಳಿಗ್ಗೆ ಅವರಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿತ್ತು.

ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಹಂಗಾಮಿಯಾಗಿ ಡಾ.ಎಂ.ಎ.ಸಲೀಂ ಅವರು ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಎರಡು ತಿಂಗಳ ಬಳಿಕ ಕಾಯಂ ಆಗಿ ನೇಮಕಗೊಳ್ಳಲಿದ್ದಾರೆ.

Advertisements

ಅಲೋಕ್ ಮೋಹನ್ ಅವರ ಅವಧಿ ಏಪ್ರಿಲ್‌ಗೆ ಮುಗಿದಿತ್ತಾದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಸಲೀಂ ಅವರು ಮುಂದಿನ ವರ್ಷದ ಜೂನ್‌ಗೆ ನಿವೃತ್ತರಾಗಲಿದ್ದು. ಹದಿಮೂರು ತಿಂಗಳ ಕಾಲ ಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕದ ತುಮಕೂರು ಜಿಲ್ಲೆಯವರಾದ ಡಾ.ಸಲೀಂ ಅವರು ಮೂರು ದಶಕದ ಅವಧಿಯಲ್ಲಿ ಕುಶಾಲನಗರ ಎಎಸ್ಪಿ, ಉಡುಪಿ, ಹಾಸನ ಎಸ್ಪಿ, ಮೈಸೂರು ನಗರ ಪೊಲೀಸ್ ಆಯುಕ್ತ, ದಾವಣಗೆರೆ ಐಜಿಪಿ, ಬೆಂಗಳೂರು ನಗರ ಸಂಚಾರ ವಿಭಾಗದ ಮುಖ್ಯಸ್ಥ ಈಗ ಸಿಐಡಿ ಡಿಜಿಪಿಯಾಗಿದ್ದಾರೆ. ಸಂಚಾರ ವಿಷಯದಲ್ಲಿಯೇ ಇವರು ಪಿಎಚ್‌ಡಿ ಮಾಡಿದ್ದಾರೆ.

WhatsApp Image 2025 05 21 at 6.11.23 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X