ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸ್ಥಾನದಿಂದ ಅನರ್ಹಗೊಳಿಸಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ಜಿ ಬಸವರಾಜ್ ರೆಡ್ಡಿ ಆರೋಪಿಸಿದರು.
ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ ಖಂಡಿಸಿ ಜುಲೈ 12ರಂದು ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ಕೊಟ್ಟಿತ್ತು. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿದೆ. ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು. ರಾಹುಲ್ ಗಾಂಧಿಯವರು ಹಲವು ವೇದಿಕೆಗಳಲ್ಲಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಪ್ರಶ್ನಿಸಿದ್ದರು ಎಂಬುದನ್ನು ಇಡೀ ಜಗತ್ತು ನೋಡುತ್ತಿದೆ. ಅವರ ಈ ನಿರ್ಭಯ ನಡುವಳಿಕೆಯನ್ನು, ಸಹಿಸಿಕೊಳ್ಳದ ಬಿಜೆಪಿ ರಾಹುಲ್‌ಗಾಂಧಿ ವಿರುದ್ಧ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ” ಎಂದು ಆರೋಪಿಸಿದರು.
“ಕೇಂದ್ರದ ಬಿಜೆಪಿ ಸರ್ಕಾರದ ಅಡಚಣೆಗಳ ನಡುವೆಯೂ ಕಾಂಗ್ರೆಸ್ ನಾಯಕರು ಜನರ ಒಳತಿಗಾಗಿ, ತ್ಯಾಗಕ್ಕಾಗಿ ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯಲು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ʼನಾನು ನನ್ನ ದೇಶದ ಜನರ ಧ್ವನಿಯಾಗಿ ಹೋರಾಡುತ್ತಿದ್ದೇನೆ ಅದಕ್ಕಾಗಿ ನಾನು ಯಾವುದೇ ತ್ಯಾಗಕ್ಕಾಗಿ ಸಿದ್ಧʼ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ, ಕೇಂದ್ರ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವುದು ಖಂಡನೀಯ” ಎಂದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಲಸಿರಿ ಯೋಜನೆಯಡಿ ಕಳಪೆ ಕಾಮಗಾರಿ; ಲೋಕಾಯುಕ್ತರಿಗೆ ದೂರು
ಕಾಂಗ್ರೆಸ್ ಮುಖಂಡ ಪಾರಸಮಲ್ ಸುಖಾಣ, ಮೊಹ್ಮದ್ ಶಾಲಂ, ಕೆ ಶಾಂತಪ್ಪ, ಕೆಪಿಸಿಸಿ ಕಾರ್ಯದರ್ಶಿ ಎ ವಸಂತಕುಮಾರ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಮುಖಂಡರುಗಳಾದ ಅಮರೇಗೌಡ ಹಂಚಿನಾಳ, ನರಸಿಂಹಲು ಮಾಡಗಿರಿ, ಆಂಜನೇಯ್ಯ ಕುರುಬದೊಡ್ಡಿ, ಜಿ. ಶಿವಮೂರ್ತಿ ನಾಗವೇಣ, ಶಶಿಕಲಾ ಭೀಮರಾಯ, ನಿರ್ಮಲಾ ಬೆಣ್ಣೆ, ಶ್ರೀನಿವಾಸ ಪೋತಗಲ್, ನರಸನಗೌಡ, ಶರಣಪ್ಪ ಕಲ್ಮಲಾ, ಜಿ.ಸುರೇಶ, ಮಲ್ಲೇಶ ಕೊಲಿಮಿ ಸೇರಿದಂತೆ ಅನೇಕರು ಇದ್ದರು.