ಕಾಂಗ್ರೆಸ್‌ ವಿರುದ್ಧ ಸುಳ್ಳು ಮಾಹಿತಿ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು

Date:

Advertisements

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಯುವ ಕಾಂಗ್ರೆಸ್ ಘಟಕ ಕ್ರಿಮಿನಲ್ ಮೊಕದ್ದಮೆ ಹೂಡಿದೆ.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆ ಉಂಟು ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವುದು) ಅಡಿಯಲ್ಲಿ ಬೆಂಗಳೂರಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾಳವಿಯಾ ಹಾಗೂ ಗೋಸ್ವಾಮಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಆಗ್ರಹಿಸಿದೆ.

ಆರ್ನಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಟಿವಿಯಲ್ಲಿ ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ಕಾಂಗ್ರೆಸ್ ಸೆಂಟ‌ರ್ ಅನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಅದನ್ನು ಅಮಿತ್ ಮಾಳವೀಯ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಕೆಣಕುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸುವ ಈ ದುರುದ್ದೇಶಪೂರಿತ ಪ್ರಯತ್ನವು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ನಾವು ಮೌನವಾಗಿರುವುದಿಲ್ಲ, ನಮ್ಮ ಪಕ್ಷ ಅಥವಾ ಅದರ ನಾಯಕತ್ವದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುವ ಯಾವುದೇ ಪ್ರಯತ್ನಕ್ಕೆ ನಾವು ಶಕ್ತವಾದ ಕಾನೂನು ಮತ್ತು ರಾಜಕೀಯ ಪ್ರತಿಕ್ರಿಯೆಯನ್ನು ನೀಡುತ್ತೇವೆ. ಇದು ನಮ್ಮ ಸ್ಪಷ್ಟ ಸಂದೇಶ” ಎಂದು ಭಾರತೀಯ ಯುವ ಕಾಂಗ್ರೆಸ್ ಲೀಗಲ್ ಸೆಲ್ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.

ದೆಹಲಿ ಹಾಗೂ ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಮಾಳವಿಯಾ ಹಾಗೂ ಗೋಸ್ವಾಮಿ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X