ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30 ವರ್ಷ), ಶರತ್ ಸಿದ್ದರಾಮ ಗುಗ್ಗುರೆ (19) ಮೃತರು.
ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಮಹಾಂತೇಶ ಹಾಗೂ ಶರತ್ ಬೈಕ್‌ನಲ್ಲಿ ಕಡಗಂಚಿಯಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.