ಯಡಿಯೂರಪ್ಪ ಸೂಚನೆ, ಸಚಿವ ಪ್ರಿಯಾಂಕ್ ಖರ್ಗೆ ಕುರಿತ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ವಿಷಾದ

Date:

Advertisements

“ಆನೆ ನಡೆಯುವಾಗ ನಾಯಿ ಬೊಗುಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ಖರ್ಗೆ ನಾಯಿತರ ಬೋಗಳುತ್ತಾರೆ” ಎಂದು ನಾಲಿಗೆ ಹರಿಬಿಟ್ಟಿದ್ದ ಬಿಜೆಪಿಯ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮಕ್ಕೆ ಭಾಗವಹಿಸಲು ಛಲವಾದಿ ನಾರಯಣಸ್ವಾಮಿ ಬಂದಿದ್ದರು. ಅದಕ್ಕೂ ಮೊದಲು ಬೆಳಿಗ್ಗೆ ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡುತ್ತ ಪ್ರಿಯಾಂಕ್ ಖರ್ಗೆಯನ್ನು ನಾಯಿಗೆ ಹೋಲಿಸಿ ಮಾತನಾಡಿದ್ದರು.

ಛಲವಾದಿ ಅವರ ಈ ಹೇಳಿಕೆ ಕಲಬುರಗಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಯಿತು. ರಾಜಕೀಯವಾಗಿ ನಮ್ಮ‌ನಾಯಕರನ್ನು ನೀವು ಏನೇ ಟೀಕೆ ಮಾಡಿದರೂ ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕವಾಗಿ ನಾರಯಣಸ್ವಾಮಿ ಬೈಯ್ದಿದ್ದಾರೆ. ಅದಕ್ಕಾಗಿ ಅವರು ಕ್ಷಮೆ ಕೇಳಲೇಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ನಾರಯಣಸ್ವಾಮಿ ಚಿತ್ತಾಪುರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ ಗೇಟ್ ಮುಂದೆ ನೂರಾರು ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು. ಛಲುವಾದಿ ನಾರಯಣಸ್ವಾಮಿ ಕ್ಷಮೆ ಕೇಳಲೆಬೇಕು, ಅಲ್ಲಿಯವರೆಗೂ ಪ್ರತಿಭಟನೆ‌ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದರು. ಈ ವೇಳೆ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಬಣ್ಣ ಎರಚಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ: ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ, ವೈಯಕ್ತಿಕ ನಿಂದನೆ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

ಅಷ್ಟರಲ್ಲಿ ಈ ವಿಷಯ ರಾಜ್ಯ ಬಿಜೆಪಿ‌ ಹಿರಿಯ ನಾಯಕರ ಗಮನಕ್ಕೂ ಬಂದಿತ್ತು. ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ನಾರಯಣಸ್ವಾಮಿಗೆ ಪೋನ್ ಮಾಡಿ, ಹೇಳಿಕೆಯಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಆ ರೀತಿ ಉಲ್ಲೇಖಿಸಬಾರದಿತ್ತು ಎಂದಿದ್ದಾರೆ.

ನಂತರ ವಿಷಾದ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ವಾಮಿ, “ಪ್ರಿಯಾಂಕ್ ಖರ್ಗೆಯವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ನಮ್ಮ ನಾಯಕರಾದ ಯಡಿಯೂರಪ್ಪನವರು ಸೂಚಿಸಿದಂತೆ ಆ ಹೆಸರನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ತಿಳಿಸಿದರು.

“ನನ್ನ ಹೇಳಿಕೆಯಲ್ಲಿ ತಪ್ಪಿದ್ದರೆ ಹೋರಾಟ ಮಾಡಲಿ. ಆದರೆ, ಈ ರೀತಿ ಬೆಂಬಲಿಗರ ಮುಂದೆ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಅತಿಯಾಯ್ತು. ಇದೇನು ಪ್ರಜಾಪ್ರಭುತ್ವನಾ?” ಎಂದು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

“ಪ್ರಿಯಾಂಕ್ ಖರ್ಗೆ ಯಾವತ್ತೂ ನನ್ನ ವಿರುದ್ಧ ಮಾತನಾಡಿಲ್ವ? ಪ್ರಧಾನಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿಲ್ಲವಾ? ಇವರು ಪ್ರಧಾನಿ ವಿರುದ್ಧ ಮಾತನಾಡುತ್ತಾರೆ. ತಮ್ಮ ವಿರುದ್ಧದ ಟೀಕೆ ಸಹಿಸಿಕೊಳ್ಳೋಕೆ ಆಗಲ್ಲ. ಇವರು ತಮ್ಮನ್ನು ಏನು ಅಂದುಕೊಂಡಿದ್ದಾರೆ? ರಾಜಕೀಯದಲ್ಲಿ ಇದೆಲ್ಲ ಸಹಜ, ಇದಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಾರಾಯಣಸ್ವಾಮಿ ವೈದಿಕರ ಗುಲಾಮಗಿರಿಯಿಂದ ಬಿಡುಗಡೆ ಹೊಂದಿಲ್ಲದ ದಲಿತ ಸಮುದಾಯಕ್ಕೆ ಅಂಟಿದ ಕ್ಯಾನ್ಸರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X