ಚಿಕ್ಕಮಗಳೂರು | 40 ಜನರಿರುವ ಕಾಡಂಚಿನ ಗ್ರಾಮಕ್ಕೆ ರಸ್ತೆಯೇ ಇಲ್ಲ; ವೃದ್ಧರು, ರೋಗಿಗಳನ್ನು ಹೆಗಲ ಮೇಲೆ ಹೊರುವ ದುಃಸ್ಥಿತಿ

Date:

Advertisements

ಆರೋಗ್ಯ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾಗಿದ್ದ ವೃದ್ಧೆ ಶೇಷಮ್ಮ(70) ಎಂಬುವವರನ್ನು ಆಸ್ಪತ್ರೆಗೆ ಸೇರಿಸಲು ಜೋಳಿಗೆಯಲ್ಲಿ ಹೊತ್ತು ತಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ ಸಮರ್ಪಕ ರಸ್ತೆ ಇಲ್ಲದೆ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮುಖ್ಯರಸ್ತೆಗೆ ಬರಲು ಸಮರ್ಪಕ ರಸ್ತೆ ಇಲ್ಲದ ಕಾರಣ ವಯಸ್ಸಾದವರನ್ನು ಆಸ್ಪತ್ರೆಗೆ ಕರೆತರಲು ಜೋಳಿಗೆಯಲ್ಲಿ ಹೊತ್ತು ತರುವ ಪರಿಸ್ಥಿತಿ ಎದುರಾಗಿದೆ.

ಈಚಲಹೊಳೆ ಗಿರಿಜನ ಕಾಲೋನಿಯಲ್ಲಿ 10 ರಿಂದ 12 ಕುಟುಂಬಗಳು ವಾಸವಿದ್ದು, ಅಲ್ಲಿನ ಜನರು ವೃದ್ದೆಯನ್ನು ಜೋಳಿಗೆಯಲ್ಲಿ ಹೊತ್ತು ತಂದು ಕಳಸ ಆಸ್ಪತ್ರೆಗೆ ಸೇರಿಸಿದ್ದಾರೆ.

Advertisements

ಗಿರಿಜನ ಕುಟುಂಬಗಳು ವಾಸವಾಗಿರುವ ಈಚಲಹೊಳೆ ಕಾಲೋನಿ ಕಳಕೋಡದಿಂದ 3 ಕಿಮೀ ದೂರದಲ್ಲಿದೆ. ಈ ಕಾಲೋನಿಗೆ ಈಗಲೂ ರಸ್ತೆ ಸಂಪರ್ಕವಿಲ್ಲ. ಗಿರಿಜನರು ಅನಾರೋಗ್ಯದಂತಹ ಸ್ಥಿತಿಯಲ್ಲಿ ರೋಗಿಗಳನ್ನು ಕಳಕೋಡವರೆಗೂ ಜೋಳಿಗೆಯಲ್ಲೇ ಹೊತ್ತು ತರಬೇಕಾದ ಪರಿಸ್ಥಿದೆ ಇದೆ.

ಗಿರಿಜನ ಕಾಲೋನಿ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಳಕೋಡದಿಂದ ಈಚಲಹೊಳೆಗೆ ಸಂಪರ್ಕ ರಸ್ತೆ ಕಲ್ಪಿಸಬೇಕೆಂಬ ಗಿರಿಜನರ ಬೇಡಿಕೆ ದಶಕಗಳಿಂದ ಅರಣ್ಯರೋಧನ ಆಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನದ ನಡುವೆ ಪ್ರಸ್ತಾಪಿತ ರಸ್ತೆಯ ಅರ್ಧ ಕಿಮೀ ಹಾದು ಹೋಗುವುದರಿಂದ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯವರು ತಡೆ ಒಡ್ಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ‘ಡಿಸಿ ಮನ್ನಾ ಭೂಮಿ’ಯಲ್ಲಿ ಅಕ್ರಮ ಕಟ್ಟಡ ತೆರವಿಗೆ ದಸಂಸ ಆಗ್ರಹ

“ನ್ಯಾಷನಲ್ ಪಾರ್ಕ್ ಹೆಸರಿನಲ್ಲಿ ನಮಗೆ ಅರಣ್ಯ ಇಲಾಖೆಯವರು ಕಿರುಕುಳ ಕೊಡುತ್ತಿದ್ದಾರೆ. ನಮಗೆ ಈವರೆಗೆ ಯಾವುದೇ ಮೂಲಭೂತ ಸೌಕರ್ಯವೂ ದೊರೆತಿಲ್ಲ. ಹಿಂದಿನ ಶಾಸಕರಿಗೆ ಮನವಿ ಕೊಟ್ಟಿದ್ದೆವು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಇಂದಿನ ಸ್ಥಿತಿ ನೋಡಿ ಈಗಿನ ಶಾಸಕರಾದರೂ ರಸ್ತೆ ಮಾಡಿಸಿಕೊಡಬೇಕು. ಆದಷ್ಟು ಬೇಗ ಇಲ್ಲಿನ ಸಮಸ್ಯೆ ಬಗೆಹರಿಸಬೇಕು” ಎಂದು ಸ್ಥಳೀಯ ಗಿರಿಜನರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X