ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ ನಡೆದಿದೆ .
ಸುಭಾಷ ಹಣಮಂತಪ್ಪ (61) ಮೃತ ರೈತ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹೊಲದಿಂದ ಮನೆಗೆ ಬರಲಿಲ್ಲ ಎಂದು ಎಲ್ಲಾ ಕಡೆ ಹುಡುಕಾಟ ನಡೆಸಿದ ನಂತರ ಜಮೀನಿನಲ್ಲಿ ಮೃತದೇಹ ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ ಜಿಲ್ಲೆಯ ಕೆರೆ ಪುನಶ್ಚೇತನ, ಉದ್ಯಾನ ಅಭಿವೃದ್ಧಿಗೆ ₹110 ಕೋಟಿ : ಸಚಿವ ಈಶ್ವರ ಖಂಡ್ರೆ