ಲಖನೌದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್‌ನ 65 ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಬಡ್ತಿ ಪಡೆಯಲು ಆರ್‌ಸಿಬಿ ಯೋಜನೆ ಮಾಡಿಕೊಂಡಿದೆ. ರಜತ್ ಪಾಟಿದಾರ್ ಸಾರಥ್ಯದ ತಂಡ ಸುಮಾರು 20 ದಿನಗಳ ಬಳಿಕ ಮೈದಾನವನ್ನು ಪ್ರವೇಶಿಸಲಿದೆ.
ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿದ 12 ಪಂದ್ಯಗಳಲ್ಲಿ ಆರ್‌ಸಿಬಿ 8 ಜಯ, 3 ಸೋಲು ಕಂಡಿದ್ದು 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದರೆ, 19 ಅಂಕಗಳು ಆಗುತ್ತವೆ. ಈ ಮೂಲಕ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಬಡ್ತಿ ಪಡೆಯುತ್ತದೆ. ಎಸ್‌ಆರ್‌ಎಚ್ ಇದೇ ಅಂಗಳದಲ್ಲಿ ಮೂರು ದಿನಗಳ ಹಿಂದೆ ಪಂದ್ಯವನ್ನು ಆಡಿದಾಗ ಕಪ್ಪು ಮಣ್ಣಿನ ಪಿಚ್‌ನಲ್ಲಿ ಆಡಿತ್ತು. ಆದರೆ ಇಂದು ಕೆಂಪು ಮಣ್ಣಿನ ಪಿಚ್ ಮೇಲೆ ಆಡಲಿದೆ.
ಉಭಯ ತಂಡಗಳು ಈಗಾಗಲೇ 25 ಪಂದ್ಯಗಳಲ್ಲಿ ಮುಖಾಮುಖಿ ಆಗಿದ್ದು ಆರ್‌ಸಿಬಿ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಎಸ್‌ಆರ್‌ಎಚ್ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಈ ಲೀಗ್‌ನಲ್ಲಿ ಆರ್‌ಸಿಬಿ ಅಮೋಘ ಫಾರ್ಮ್‌ನಲ್ಲಿದ್ದು, ಮತ್ತೊಂದು ಜಯದ ಕನಸಿನಲ್ಲಿದೆ. ಈ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಮಳೆ ಬರುವ ಕಾರಣದಿಂದ ಪಂದ್ಯವನ್ನು ಲಖನೌಗೆ ವರ್ಗಾಯಿಸಲಾಗಿತ್ತು.
ಲಖನೌದಲ್ಲಿ ಹವಾಮಾನ ಹೇಗಿದೆ?
ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ. ಪಂದ್ಯ ನಡೆಯುವ ಸಮಯದಲ್ಲಿ ಲಖನೌದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಮಳೆ ಬರುವ ಸಾಧ್ಯತೆ ಬಹುತೇಕ ಕಡಿಮೆ. ಉತ್ತರ ಪ್ರದೇಶದ ರಾಜಧಾನಿಯಲ್ಲಿ ಇಂದು ತಾಪಮಾನ 30 ಡಿಗ್ರಿಯಿಂದ 36 ಡಿಗ್ರಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ
ಒಂದುಉ ವೇಳೆ ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ರದ್ದಾದರೆ ಅಥವಾ ಸೋತರೆ ಅಂಕಪಟ್ಟಿಯಲ್ಲಿ ಅಗ್ರ 2ರ ಸ್ಥಾನ ಪಡೆಯುವ ಆರ್‌ಸಿಬಿ ಯೋಜನೆ ಈಡೇರುವುದಿಲ್ಲ. ಹೀಗಾಗಿ ಇಂದಿನ ಪಂದ್ಯ ಕುತೂಹಲ ಕೆರಳಿಸಿದೆ.
ಪಂದ್ಯವಾಡುವ ಉಭಯ ತಂಡಗಳ ಸಂಭಾವ್ಯ ಆಟಗಾರರು
ಆರ್‌ಸಿಬಿ:
ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ರಸಿಖ್ ದಾರ್ ಸಲಾಮ್, ಮನೋಜ್ ಸಿಂಗ್ ಭಾಂಡಗೆಲ್, ಲಿವಿಂಗ್ ಭಾಂಡಗೆಲ್, ರಾಸಿಖ್ ದಾರ್ ಸಲಾಂ, ಜಾಕೋಬ್ ಭಾಂಡಗೆಲ್ ತುಷಾರಾ, ಲುಂಗಿ ಎನ್‌ಗಿಡಿ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್.
ಎಸ್‌ಆರ್‌ಎಚ್:
ಪ್ಯಾಟ್ ಕಮ್ಮಿನ್ಸ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಥರ್ವ ಟೇಡೆ, ಅಭಿನವ್ ಮನೋಹರ್, ಅನಿಕೇತ್ ವರ್ಮಾ, ಸಚಿನ್ ಬೇಬಿ, ಸ್ಮರಣ್ ರವಿಚಂದ್ರನ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಹರ್ಷಲ್ ಪಟೇಲ್, ಕಮಿಂದು ಮೆಂಡಿಸ್, ವಿಯಾನ್ ಶರ್ಮಾ ಮಲ್ಡರ್, ರಾಹುಲ್ ಶರ್ಮಾ ಮಲ್ಡರ್, ಅಭ್ತಿಶ್ ಕುಮಾರ್ ಚಹಾರ್, ಸಿಮರ್ಜಿತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಇಶಾನ್ ಮಾಲಿಂಗ.
ಪಂದ್ಯ ಆರಂಭ: ಸಂಜೆ 7.30
ನೇರ ಪ್ರಸಾರ: ಜಿಯೋ ಹಾಟ್ ಸ್ಟಾರ್ ಹಾಗೂ ಸ್ಟಾರ್ ಸ್ಪೋರ್ಟ್ಸ್