ಬಳ್ಳಾರಿ | ಬೆಂಬಲಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

Date:

Advertisements

ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ವತಿಯಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಪ್ರತಿ ಕ್ವಿಂಟಾಲ್‌ಗೆ ರೂ.7,280ರಂತೆ ಸೂರ್ಯಕಾಂತಿ ಬೀಜ ಖರೀದಿಸಲಾಗುವುದು.

ಖರೀದಿ ಕೇಂದ್ರಗಳ ವಿವರ:

Advertisements

ಬಳ್ಳಾರಿ ಎಪಿಎಂಸಿಯ ಆಡಳಿತ ಕಚೇರಿ (ಮೊ.8722047273, 6366975388). ಬಳ್ಳಾರಿ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ (ಮೊ.7353155205). ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವು ಖರೀದಿ ಏಜೆನ್ಸಿಯಾಗಿರುತ್ತದೆ.

ಬೇಕಾದ ದಾಖಲೆ:

ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್‌ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು. ನೋಂದಾಯಿಸಿಕೊಳ್ಳಲು ಇಂದಿನಿಂದ 80 ದಿನಗಳವರೆಗೆ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಬಳ್ಳಾರಿ | ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಅವಧಿ ವಿಸ್ತರಿಸಲು ರೈತರ ಆಗ್ರಹ

ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊಂಡ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು ಇಂದಿನಿಂದ 90 ದಿನಗಳವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ. ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X