ಸಿಂಧೂ ನದಿ ನೀರು ನಿಲ್ಲಿಸಿದರೆ ನಿಮ್ಮ ಉಸಿರು ನಿಲ್ಲಿಸುತ್ತೇವೆ ಎಂದು ಪಾಕ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹಮದ್ ಷರೀಫ್ ಚೌಧರಿ ಅವರು ಭಯೋತ್ಪಾದಕ ಹಫೀಜ್ ಸಯೀದ್ ರೀತಿಯಲ್ಲಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.
ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತವು ಸಿಂಧೂ ನದಿ ನೀರಿನ ಒಪ್ಪಂದ ಅಮಾನತು ಮಾಡಿರುವ ವಿಚಾರ ಪ್ರಸ್ತಾಪಿಸಿದ್ದಾರೆ. ಈ ವೇಳೆ, ಭಾರತ ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು. ಭಾರತದ ಈ ಕ್ರಮವನ್ನು ಉಲ್ಲೇಖಿಸಿ, 2008ರ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಸಹ ಇದೇ ಹೇಳಿಕೆ ನೀಡಿದ್ದ. ಇದೀಗ ಪಾಕ್ ಸೇನಾ ವಕ್ತಾರ ಸಹ ಅದನ್ನೇ ಪುನರುಚ್ಚರಿಸಿದ್ದಾರೆ. ಪಾಕ್ ಸೇನಾ ವಕ್ತಾರ ಕಾರ್ಯಕ್ರಮದಲ್ಲಿ ಮಾತಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ
ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಏ.23 ರಂದು ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿತ್ತು. 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಎರಡು ದೇಶಗಳ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಹಂಚಿಕೆಯ ಒಪ್ಪಂದ ನಡೆದಿತ್ತು.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಒಂಬತ್ತು ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಹಲವು ಉಗ್ರರನ್ನು ಕೊಂದಿತ್ತು.
He seems to have copied Lashkr e Taiba’s founder Hafiz Saeed word for word “If India stops the water we will stop their breath” I guess the Pakistani military establishment shares a script with recognized terrorists. 🤷🏻♀️ pic.twitter.com/b6dG4vi4V1
— Mariam Solaimankhil (@Mariamistan) May 22, 2025
A spokesperson for the Pakistani military issued a warning to India regarding the suspension of the Indus Water Treaty,
— Harsh Patel (@Harshpatel1408) May 23, 2025
quoting terrorist Hafiz Saeed with the statement: ‘If you cut off our water, we will cut off your breath.’
pic.twitter.com/hl45IPfLVM