ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಅವರು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
‘ಮೇ 21ರಂದು ಸುರಿದ ಭಾರಿ ಮಳೆಯಿಂದ ಲೋಕೋಪಯೋಗಿ ಇಲಾಖೆಗೆ ಸೇರಿದ ಸೇತುವೆ ಸಂಪೂರ್ಣ ಹಾಳಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಸಂಪರ್ಕ ಸ್ಥಗಿತಗೊಂಡು ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.

ಹೊಸ ಸೇತುವೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರು ಮಾಡುವಂತೆ ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ