ಬಂಡವಾಳಿಗರ ಪರವಾಗಿ ಕಾಂಗ್ರೆಸ್, ಬಿಜೆಪಿ ನೀತಿಗಳನ್ನು ರೂಪಿಸಿವೆ: ಎಸ್‌ಯುಸಿಐ

Date:

Advertisements

ದೇಶದಲ್ಲಿ ಶೋಷಕ ಬಂಡವಾಳಶಾಹಿ ವರ್ಗ ಹಾಗೂ ಶೋಷಿತ ಕಾರ್ಮಿಕ ವರ್ಗಗಳು ಅಸ್ತಿತ್ವದಲ್ಲಿರುವುದನ್ನು ಯಾರೂ ಮರೆಮಾಚಲಾಗದು. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್, ಬಿಜೆಪಿ ಸೇರಿದಂತೆ ದೇಶವನ್ನಾಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಅವರ ಪರವಾದ ನೀತಿಗಳನ್ನು ರೂಪಿಸಿವೆ. ದೇಶದ ಬಹುಸಂಖ್ಯಾತ ದುಡಿಯುವ ಜನರ ಬದುಕನ್ನು ಬೀದಿಗೆ ತಂದಿವೆ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್‌) ಕೇಂದ್ರ ಪಾಲಿಟ್ ಬ್ಯೂರೋ ಸದಸ್ಯ ಕೆ ರಾಧಾಕೃಷ್ಣ ಆರೋಪಿಸಿದ್ದಾರೆ.

ಎಸ್‌ಯುಸಿಐ ಸಂಸ್ಥಾಪಕ ಶಿವದಾಸ್ ಘೋಷ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಧಾರವಾಡದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ರಾಧಾಕೃಷ್ಣ ಮಾತನಾಡಿದರು. “ಸ್ವಾತಂತ್ರ್ಯ ಸಂದರ್ಭದಲ್ಲಿ ಕೆಲವು ಕೋಟಿಗಳಿದ್ದ ಬಂಡವಾಳಗಾರರ ಸಂಪತ್ತು, ಇಂದು ಲಕ್ಷಾಂತರ ಕೋಟಿ ದಾಟಲು ದೇಶವನ್ನಾಳಿದ ಪಕ್ಷಗಳು ರೂಪಿಸಿದ ನೀತಿಗಳೇ ಕಾರಣ. ಈ ಸತ್ಯವನ್ನು ಎಲ್ಲಿಯವರೆಗೆ ದುಡಿಯುವ ವರ್ಗ ಗ್ರಹಿಸುವುದಿಲ್ಲವೋ ಹಾಗೂ ಚುನಾವಣಾ ಭ್ರಮೆಯಲ್ಲಿ ಮುಳುಗಿರುತ್ತಾರೋ ಅಲ್ಲಿಯವರೆಗೆ ಸಮಾಜವಾದಿ ಕ್ರಾಂತಿಯನ್ನು ಸಾಧಿಸಲು ಸಾದ್ಯವಿಲ್ಲ” ಎಂದರು.

“ದುಡಿಯುವ ಜನರು ತಮ್ಮ ದಿನನಿತ್ಯದ ಬೇಡಿಕೆಗಳನ್ನು ಈಡೇರಿಸಲು ಪ್ರಜಾತಾಂತ್ರಿಕ ಚಳುವಳಿಗಳನ್ನು ಬೆಳೆಸುತ್ತ, ವರ್ಗ ಸಂಘರ್ಷವನ್ನು ತೀವ್ರಗೊಳಿಸುತ್ತ, ಅಂತಿಮವಾಗಿ ಶೋಷಣಾರಹಿತ ಸಮಾಜವಾದಿ ವ್ಯವಸ್ಥೆಗೆ ಜನ್ಮ ನೀಡಲು ಸಮಾಜವಾದಿ ಕ್ರಾಂತಿಯನ್ನು ನೆರವೇರಿಸಬೇಕಾಗುತ್ತದೆ. ದೇಶದ ದುಡಿಯುವ ವರ್ಗ, ವಿಮೋಚನೆಯ ಮಾರ್ಗ ತೋರಿಸಿದ ಶಿವದಾಸ್ ಘೋಷ್‌ ಅವರ ಚಿಂತನೆಗಳನ್ನು ಅಳವಡಿಸಿಕೊಂಡು ಹೋರಾಟ ರೂಪಿಸಬೇಕು” ಎಂದು ಕರೆ ಕೊಟ್ಟರು.

Advertisements

ಪಕ್ಷದ ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿ, “ಪಶ್ಚಿಮ ಬಂಗಾಳದ ಒಂದು ಪುಟ್ಟ ಜಿಲ್ಲೆಯಲ್ಲಿ ಕೆಲವೇ ಸಂಗಾತಿಗಳೊಂದಿಗೆ ಶಿವದಾಸ್ ಘೋಷ್ ಅವರು ಪ್ರಾರಂಭಿಸಿದ ಪಕ್ಷ, ಇಂದು 27 ರಾಜ್ಯಗಳಲ್ಲಿ ಹೋರಾಟಗಳನ್ನು ಬೆಳೆಸುತ್ತಿದೆ. ದೇಶದಲ್ಲಿ ಬಂಡವಾಳಶಾಹಿ ವರ್ಗ ತನ್ನ ಹಿತಾಸಕ್ತಿಯನ್ನು ಕಾಪಾಡಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ಹಲವಾರು ಪಕ್ಷಗಳನ್ನು ಪೋಷಿಸುತ್ತಾ ಬಂದಿದೆ. ಅದೇ ರೀತಿ ದುಡಿಯುವ ವರ್ಗ ತನ್ನ ವಿಮೋಚನೆಗಾಗಿ ನೈಜ ಕಮ್ಯುನಿಸ್ಟ್ ಪಕ್ಷವನ್ನು ಬಲಪಡಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗನ್ನವರ, ಜಿಲ್ಲಾ ಸಮಿತಿ ಸೆಕ್ರೆಟ್ರಿಯೇಟ್ ಸದಸ್ಯ ಗಂಗಾಧರ ಬಡಿಗೇರ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X