ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರಕ್ಕೆ ಚಾಲನೆ

Date:

Advertisements

ಬೀದರ್ ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಈಚೆಗೆ ಆರಂಭಗೊಂಡಿತು.

ʼಸಸಿಗೆ ನೀರೆರೆದು ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼದೇಶದ ಪ್ರಗತಿಯಲ್ಲಿ ಯುವಕರ ಪಾತ್ರ ಬಹಳ ಮಹತ್ವದ್ದಾಗಿದೆ. ಸದ್ಯ ತಂತ್ರಜ್ಞಾನದ ಯುಗ ಇದೆ. ತಂತ್ರಜ್ಞಾನ ಬಲ್ಲವರಿಗೆ ಎಲ್ಲೆಡೆ ಬೇಡಿಕೆ ಇದೆ. ಹೀಗಾಗಿ ಎಐ ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಸೇರಿದಂತೆ ವಿವಿಧ ತಂತ್ರಜ್ಞಾನಗಳನ್ನು ಅರಿಯಬೇಕುʼ ಎಂದು ತಿಳಿಸಿದರು.

ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪಾತ್ರದ ಕುರಿತು ನಿವೃತ್ತ ಪ್ರಾಚಾರ್ಯರಾದ ಮಧುಕರ ದೇಶಪಾಂಡೆ, ಗಂಗಾಧರ ಕೋರಿ ಮಾತನಾಡಿದರು.

Advertisements

ಎನ್‍ಎಸ್‍ಎಸ್ ಸಂಯೋಜಕ ಡಾ. ಪೃಥ್ವಿರಾಜ ಹಾಲಪ್ಪಗೋಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಜಿನ ಜಾತ್ರೆ ಹಾಗೂ ಜಾನಪದ ಉತ್ಸವ ನಿಮಿತ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಪ್ರೊ. ಧನರಾಜ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಮಾಜಿ ಅಧ್ಯಕ್ಷ ಅನಿಲ್ ಪನ್ನಾಳೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಶಿಬಾಯಿ ಬಕ್ಕಪ್ಪ, ಪ್ರಮುಖರಾದ ಮಲ್ಲಿಕಾರ್ಜುನ, ವಿಜಯಕುಮಾರ, ಅಬ್ದುಲ್ ಎಸ್, ಡಾ. ರಾಜಕುಮಾರ ಟಿ, ಡಾ. ಜಯಶೀಲಾ, ಶಿವಕುಮಾರ ಬಿರಾದಾರ, ಸುರೇಂದ್ರಸಿಂಗ್, ದಶವಂತ ಬಂಡೆ, ಡಾ. ಶಾಜಿಯಾ ಅಂಜುಮ್, ಮಮತಾ ಮತ್ತಿತರರು ಇದ್ದರು.
ಸವಿತಾ ಪಾಟೀಲ ನಿರೂಪಿಸಿದರು.

ಇದನ್ನೂ ಓದಿ : ಬೀದರ್‌ | ಮೇ 26 ರಿಂದ ಜೂ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : 47 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X