- ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ
- ಮೊದಲ ದಿನವೇ 5 ವಿಕೆಟ್ ಕಿತ್ತು ಆರ್. ಅಶ್ವಿನ್ ದಾಖಲೆ
ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದೆ.
ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಅಶ್ವಿನ್ ಸ್ಪಿನ್ ಸಹಿತ ಟೀಮ್ ಇಂಡಿಯಾದ ಸ್ಪಿನ್ ಮೋಡಿಗೆ ನಲುಗಿದ ವೆಸ್ಟ್ಇಂಡೀಸ್, 64.3 ಓವರ್ಗಳಲ್ಲಿ 150 ರನ್ಗಳಿಗೆ ಆಲೌಟ್ ಆಗಿದೆ.
ಟೀಂ ಇಂಡಿಯಾದ ಅತ್ಯಂತ ಯಶಸ್ವಿ ಬೌಲರ್ಗಳಲ್ಲಿ ಒಬ್ಬರಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಐದು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲಾಗುವುದು: ಸಚಿವ ಶಿವಾನಂದ ಪಾಟೀಲ
ಭಾರತದ ಹಿಡಿತದಲ್ಲಿರುವ ಈ ಪಂದ್ಯದಲ್ಲಿ ಅಶ್ವಿನ್ 24.3 ಓವರ್ ಎಸೆದು, 60 ರನ್ಗೆ ಐದು ವಿಕೆಟ್ ಐದು ವಿಕೆಟ್ ಗಳಿಸಿದರೆ, ಸ್ಪಿನ್ನರ್ ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಕೂಡ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಭಾರತ ಬೌಲಿಂಗ್ ಎದುರು ರನ್ಗಳಿಸಲು ಪರದಾಡಿದ ಆತಿಥೇಯ ತಂಡ, ಮೊದಲ ಇನ್ನಿಂಗ್ಸ್ನಲ್ಲಿ 150 ರನ್ಗಳಿಗೆ ಅಲೌಟ್ ಆಗಿದೆ.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಭಾರತ ವಿಕೆಟ್ ನಷ್ಟವಿಲ್ಲದೆ 80 ರನ್ ಗಳಿಸಿದೆ. ಟೆಸ್ಟ್ನಲ್ಲಿ ಪದಾರ್ಪಣೆ ಪಂದ್ಯ ಆಡುತ್ತಿರುವ ಯಶಸ್ವಿ ಜೈಸ್ವಾಲ್ ಔಟಾಗದೆ 40 ಮತ್ತು ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದ್ದು, ಎರಡನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ವೆಸ್ಟ್ಇಂಡೀಸ್ ಪರವಾಗಿ ಪದಾರ್ಪಣೆ ಪಂದ್ಯ ಆಡಿದ ಎಡಗೈ ಬ್ಯಾಟರ್ ಅಲಿಕ್ ಅಥನಾಝ್ 47 ರನ್ ಗಳಿಸಿದ್ದು, ಹೊರತುಪಡಿಸಿದರೆ ಯಾವುದೇ ಬ್ಯಾಟ್ಸ್ ಮನ್ ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಅಥನಾಝ್ ಅಶ್ವಿನ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿ, ಶಾರ್ದೂಲ್ ಠಾಕೂರ್ಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ಪದಾರ್ಪಣೆ ಪಂದ್ಯದಲ್ಲಿ ಅರ್ಧಶತಕ ದಾಖಲಿಸುವ ಅವಕಾಶದಿಂದ ವಂಚಿತರಾದರು.