ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ ಸಿ ಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಎಂಬುವವರು ಅಮಾನತುಗೊಂಡ ಅಧಿಕಾರಿಗಳು.
ಈ ಸುದ್ದಿ ಓದಿದ್ದೀರಾ? ಬೀದರ್ | ಮುಖ್ಯ ಶಿಕ್ಷಕ ಶಾಲೆಗೆ ಗೈರು; ಶಿಸ್ತು ಕ್ರಮಕ್ಕೆ ಕೆಆರ್‌ಎಸ್ ಆಗ್ರಹ
ಮೂವರು ಅಧಿಕಾರಿಗಳು ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿದ್ದಾರೆಂಬ ಆರೋಪದ ಮೇಲೆ, ಅಮಾನತು ಮಾಡಲಾಗಿದೆ.