51,000 ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

Date:

Advertisements

ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸುವ ಆದೇಶ ನೀಡಿದೆ.ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಆರಂಭವಾಗಲಿ ಎಂಬ ಉದ್ದೇಶ ಈ ತಾತ್ಕಾಲಿಕ ನೇಮಕಾತಿಗೆ ಆದೇಶ ಹೊರಡಿಸಿದೆ ಎಂದು ತಿಳಿಸಿದೆ.

2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

1001648694
1001648691

ರಾಜ್ಯ ಸರ್ಕಾರದ ಈ ತ್ವರಿತ ಕ್ರಮವು ವಿದ್ಯಾರ್ಥಿಗಳ ಶಿಕ್ಷಣ ನಿರಂತರವಾಗಿರಿಸಲು ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತದೆ.51,000 ಅತಿಥಿ ಶಿಕ್ಷಕರ ಪೈಕಿ 40,000ರನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಹಾಗೂ ಉಳಿದ 11,000ರನ್ನು ಸರ್ಕಾರಿ ಪ್ರೌಢ ಶಾಲೆಗಳಿಗೆ ನೇಮಿಸಿ ಆದೇಶಿಸಿದೆ.

Advertisements

“ವಿದ್ಯಾರ್ಥಿಗಳು ಶಿಕ್ಷಕರ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಮುಖ್ಯ ಗುರಿ. ಈ ತ್ವರಿತ ನಿರ್ಧಾರ ಶೈಕ್ಷಣಿಕ ಕೊರತೆಯನ್ನು ಪೂರೈಸಲು ಅಗತ್ಯವಾಗಿದೆ,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಹೇಳಿದ್ದಾರೆ.

“ಹೊಸ ಶೈಕ್ಷಣಿಕ ವರ್ಷ ಆರಂಭದ ದಿನದಿಂದಲೇ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗುವುದು ನಮ್ಮ ಆದ್ಯತೆ,” ಎಂದೂ ಅವರು ತಿಳಿಸಿದರು.ಅತಿಥಿ ಶಿಕ್ಷಕರಿಗೆ ನೀಡಲಾಗುವ ಗೌರವಧನದ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅಥಿತಿ ಶಿಕ್ಷಕರ ಜಿಲ್ಲಾ, ತಾಲ್ಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

“ಹೊಸ ಶೈಕ್ಷಣಿಕ ವರ್ಷ ಆರಂಭದ ದಿನದಿಂದಲೇ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗುವುದು ನಮ್ಮ ಆದ್ಯತೆ,” ಎಂದೂ ಶಿಕ್ಷಣ ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X