ವಿಜಯಪುರ | ನಿಖರತೆ, ಸ್ಪಷ್ಟತೆಯಿರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುತ್ತದೆ: ಪ್ರೊ. ಪಿ ಜಿ ತಡಸದ

Date:

Advertisements

ನಿಖರತೆ ಮತ್ತು ಸ್ಪಷ್ಟತೆ ಇರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುವಲ್ಲಿ ಸಹಾಯಕವಾಗುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ ಜಿ ತಡಸದ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವುಮೆನ್ ಮೀಡಿಯಾ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ‘ಟಿವಿ ಸುದ್ದಿ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಸುದ್ದಿಯನ್ನು ಜನರ ಹೃದಯಕ್ಕೆ ನೇರವಾಗಿ ತಲುಪಿಸುವುದು ಟಿವಿ ಮಾಧ್ಯಮದ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿ ಬಳಸುವ ಭಾಷೆ ಸರಳ, ಸ್ಪಷ್ಟ ಮತ್ತು ಜನರಿಗೆ ಆಕರ್ಷಕವಾಗಿರಬೇಕು. ಪ್ರತಿ ಪದವೂ ಅರ್ಥಪೂರ್ಣವಾಗಿದ್ದು, ಜನರ ಮನಸ್ಸಿನಲ್ಲಿ ಪ್ರಭಾವ ಬೀರುವಂತೆ ಇರಬೇಕು. ಭಾಷೆಯ ಶೈಲಿ ಮೃದು, ಸಂವೇದನಾಶೀಲ ಹಾಗೂ ನೈತಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು” ಎಂದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, “ಟಿವಿ ಬರವಣಿಗೆ ಇಂದು ದೊಡ್ಡ ಸವಾಲಾಗಿ ರೂಪುಗೊಂಡಿದೆ. ಏಕೆಂದರೆ ಪ್ರತಿ ಕ್ಷಣವೂ ತ್ವರಿತವಾಗಿ ಬದಲಾಗುತ್ತಿರುವ ಲೋಕದಲ್ಲಿ ನಿಖರವಾದ, ಸ್ಪಷ್ಟವಾದ ಮತ್ತು ಆಕರ್ಷಕ ಸುದ್ದಿಯನ್ನು ತಲುಪಿಸುವ ಹೊಣೆಗಾರಿಕೆ ಮಾಧ್ಯಮದ ಮೇಲಿದೆ. ಈ ಸವಾಲನ್ನು ಯಶಸ್ವಿಯಾಗಿ ನಿಭಾಯಿಸಲು ಭಾಷಾ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಆಗತ್ಯವಾಗಿದೆ. ಪರಿಣಾಮಕಾರಿಯಾದ ಬರವಣಿಗೆ ಮಾತ್ರವೇ ಪ್ರೇಕ್ಷಕರ ಗಮನ ಸೆಳೆಯಲು ಮತ್ತು ಸತ್ಯಸ್ಥಿತಿಯನ್ನು ಸರಿಯಾಗಿ ಪ್ರಸ್ತುತಪಡಿಸಲು ನೆರವಾಗುತ್ತದೆ” ಎಂದರು.‌

ಇದನ್ನೂ ಓದಿದ್ದೀರಾ? ಹಾರೋಹಳ್ಳಿ | ಬನವಾಸಿಯಲ್ಲಿ ಅಸ್ಪೃಶ್ಯತೆ ಆಚರಣೆ: ರಾಜಿ, ಮಾತುಕತೆ ನೆಪದಲ್ಲಿ ಆರೋಪಿಗಳ ರಕ್ಷಣೆ

ಕಾರ್ಯಾಗಾರದಲ್ಲಿ ಬೆಂಗಳೂರಿನ ನ್ಯೂಸ್ ಫಸ್ಟ್ ಕನ್ನಡ ವಾಹಿನಿಯ ಸೀನಿಯರ್ ಕಾಪಿ ಎಡಿಟರ್ ಪೂರ್ಣಿಮಾ ಹೀರೆಮಠ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X