ಕೊಡಗು | ‘ ಭದ್ರಾ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ

Date:

Advertisements

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ‘ ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಭದ್ರ ಸಾಫ್ಟ್ ಏರಿಯಾ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದರು.

ದೇವರಪುರದಲ್ಲಿ ವ್ಯಕ್ತಿಯೋರ್ವರನ್ನು ಕಾಡಾನೆ ಬಲಿ ಪಡೆದ ದುರ್ಘಟನೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಕಾಡಾನೆ ಸೆರೆಗೆ ಕೂಡಲೇ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆಂದರು.

ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಮಾನವ, ವನ್ಯಜೀವಿ ಸಂಘರ್ಷವಿದೆ. ಕಾಡಾನೆ ಹಾವಳಿಯಿಂದ ರಾಜ್ಯದಲ್ಲೇ ಅತಿ ಹೆಚ್ಚು ಜೀವ ಹಾನಿ ಕೊಡಗು ಜಿಲ್ಲೆಯಲ್ಲಾಗುತ್ತಿದೆ ಎಂದು ವಿಷಾದಿಸಿದರು.

Advertisements

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಭದ್ರ ಸಾಫ್ಟ್ ಏರಿಯಾ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ ಕಲ್ಪಿಸಲು 2 ರಿಂದ 3 ವರ್ಷಗಳು ಬೇಕಾಗಬಹುದು. ಕಾಡಾನೆಗಳ ಪುನರ್ವಸತಿ ಕಲ್ಪಿಸಿದ್ದಲ್ಲಿ ಮುಂದಿನ 2 ವರ್ಷಗಳಲ್ಲಿ ಶೇ.90ರಷ್ಟು ಸಮಸ್ಯೆ ಕಡಿಮೆಯಾಗಲಿದೆ. ಸಮಸ್ಯೆ ಪರಿಹಾರಕ್ಕೆ ಎಲ್ಲಾ ಪಕ್ಷಗಳು, ಸಂಘ, ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಗಣತಿ ಪ್ರಕಾರ ನಾಗರಹೊಳೆಯಲ್ಲಿ 2 ಸಾವಿರ ಕಾಡಾನೆಗಳಿದ್ದು, 563 ಹುಲಿಗಳು ಇವೆ ಜನವಸತಿ ಪ್ರದೇಶದಲ್ಲಿರುವ ಎರಡು ಹುಲಿಗಳನ್ನು ಸೆರೆ ಹಿಡಿಯಲು ಸಂಬoಧಿಸಿದ ಇಲಾಖೆಯಿಂದ ಅನುಮತಿ ದೊರೆತ್ತಿದ್ದರೂ ಸಹ ಅರಣ್ಯ ಇಲಾಖೆ ಕಾರ್ಯಗತ ಮಾಡದಿರುವ ಬಗ್ಗೆ ಸಂಕೇತ್ ಪೂವಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಸ್ಎಸ್ಎಲ್ಸಿ, ಪಿಯುಸಿ ನಂತರ ಮುಂದೇನು? ವಿಚಾರ ಸಂಕೀರಣ

ಅರಣ್ಯ ಇಲಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X