BREAKING NEWS | ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

Date:

Advertisements

ಇಂದು ಯುಜಿ ಸಿಇಟಿ- 2025 ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್​ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವೆಬ್​ಸೈಟ್​ನಲ್ಲಿ ಸಿಇಟಿ(CET) ಫಲಿತಾಂಶ ಪ್ರಕಟಿಸಲಾಗುತ್ತದೆ.

3.30 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಸಚಿವ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತಷ್ಟು ಸುಲಭ

Advertisements

ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್​​ಇ ಶಾಲೆಯ ಭವೇಶ್ ಜಯಂತಿ ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಉತ್ತರಹಳ್ಳಿಯ ಕನಕಪುರ ರಸ್ತೆಯಲ್ಲಿರುವ ಚೈತನ್ಯ ಟೆಕ್ನೋ ಸ್ಕೂಲ್‌ನ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ ಎರಡನೇ ರ‍್ಯಾಂಕ್, ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ‍್ಯಾಂಕ್ ಗಳಿಸಿದ್ದಾರೆ.

ಇನ್ನು ಕೃಷಿ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ರ‍್ಯಾಂಕ್, ಸಾಯಿಶ್ ಶರವಣ ಪಂಡಿತ್ ಎರಡನೇ ರ‍್ಯಾಂಕ್ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ರ‍್ಯಾಂಕ್ ಗಳಿಸಿದ್ದಾರೆ.

ಶುಶ್ರೂಷೆ(nursing) ವಿಭಾಗದಲ್ಲಿ ಯಲಹಂಕ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಸ್ಥಾನ, ಹೆಚ್​ಎಸ್​ಆರ್ ಲೇಔಟ್​​ನ ನ್ಯಾಷನಲ್ ಪಬ್ಲಿಕ್‌ ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಸ್ಥಾನ, ಮಂಗಳೂರಿನ ವಳಚ್ಚಿಲ್​ನ ಎಕ್ಸ್​ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ಸ್ಥಾನ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

ಡಿ ಪಾರ್ಮ್‌ನಲ್ಲಿ ಆತ್ರೆಯಾ ವೆಂಕಟಚಲಂ ಪ್ರಥಮ, ಭವೇಶ್ ಜಯಂತಿ ದ್ವಿತೀಯ, ಹರೀಶ್‌ ರಾಜ್ ತೃತೀಯ ರ‍್ಯಾಂಕ್ ಗಳಿಸಿದ್ದಾರೆ. ವೆಟರ್ನರಿ ಪ್ರಾಕ್ಟಿಕಲ್‌ನಲ್ಲಿ ರಕ್ಷಿತಾ.ವಿ.ಪಿ ಪ್ರಥಮ, ನಂದನ್ ದ್ವಿತೀಯ, ಭುವನೇಶ್ವರಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಏಪ್ರಿಲ್ 16, 17ರಂದು ಇಂಜಿನಿಯರಿಂಗ್, ಕೃಷಿ, ಪಶು ವೈದ್ಯಕೀಯ ವಿಜ್ಞಾನ ವಿಭಾಗ ಸೇರಿದಂತೆ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿದೆ.

ಫಲಿತಾಂಶ ಪ್ರಕಟಿಸುವುದು ಹೇಗೆ?

cetonline.karnataka.gov.in ಅಥವಾ kea.kar.nic.inನಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶವನ್ನು ನೋಡಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X