ಯಾದಗಿರಿ ನಗರದ ಕನಕ ವೃತ್ತ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ.
ಶುಕ್ರವಾರ ಮಧ್ಯ ರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. 20 ಲೀಟರ್ ಬಾಕ್ಸ್‌ನಲ್ಲಿ ಪೆಟ್ರೋಲ್ ತಂದು ಸುಡಲಾಗಿದ್ದು, ಕ್ಯಾನ್ ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಚೇರಿಯಲ್ಲಿರುವ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ಸೋಫಾ, ಎಸಿ ಸೇರಿ ಹಲವು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ.
ಘಟನೆ ಮಾಹಿತಿ ತಿಳಿದು ಜಿಲ್ಲಾ ಅಧ್ಯಕ್ಷರು ಸೇರಿ ಮುಖಂಡರು ಕಚೇರಿಗೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಹಾಗೂ ಸ್ವಾನ ದಳದಿಂದ ಪರಿಶೀಲಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ