ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

“ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮೈಸೂರಿನಲ್ಲಿ ಆಯೋಜಿಸಿದ್ದ “ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದು ವಿವರಿಸಿದರು.

Advertisements

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ವಿವರಿಸಿದರು.

ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಉಯ್ಯುವ ಶಿಕ್ಷೆ ಇದ್ದಿದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಷ್ಟ್ರ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ: ಹಲ್ಲೆ ನಡೆಸಿ ಪರಾರಿಯಾಗಿದ್ದ ಡೆಲಿವರಿ ಬಾಯ್ ವಿರುದ್ಧ ಎಫ್‌ಐಆರ್

ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X