ಹಾವೇರಿ | ಮೇ 26ರಿಂದ 28ರವಗೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ

Date:

Advertisements

“ಮೇ ೨೬ರಿಂದ ೨೮ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಅವಧಿಯಲ್ಲಿ ಸರ್ಕಾರವು ವಸತಿ ಶಾಲೆಗಳ ನೌಕರರ ಬೇಡಿಕೆಗಳ ಕುರಿತು ಸ್ಪಂದಿಸದೇ ಹೋದಲ್ಲಿ ಮೇ ೨೯ರಿಂದ ಜಿಲ್ಲಾ ಹಂತದಲ್ಲಿ ಸತ್ಯಾಗ್ರಹ ಮುನ್ನಡೆಸಲಿದ್ದೇವೆ. ಅದರಂತೆ ಮೇ ೨೯ರಂದು ಆಯಾ ವಸತಿ ಶಾಲೆಗಳಲ್ಲಿ ಸಿಬ್ಬಂದಿಗಳು ತಮ್ಮ ಕೈಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಬೇಡಿಕೆಗಳ ಈಡೇಸಬೇಕು” ಎಂದು ಆರ್ ಎಸ್ ಇ ಎ ಸಂಘಟನಾ ಕಾರ್ಯದರ್ಶಿ ವಿರೇಶ ಮರಿಗೌಡ್ರ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಸತಿ ಶಾಲೆಗಳ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗೆ ಡಾ.ವಿಜಯಮಹಾಂತೇಶ ದಾನಮ್ಮನವರ ಮನವಿ ಸಲ್ಲಿಸಿ ಮಾತನಾಡಿದರು.

“ನಮ್ಮ ಬೇಡಿಕೆಗಳನ್ನು ಸ್ಪಂದಿಸದೆ ಹೋದಲ್ಲಿ ಮೇ ೩೦ರಂದು ತರಗತಿಗಳನ್ನು ಬಹಿಷ್ಕರಿಸಿ ಅಸಹಕಾರ ವ್ಯಕ್ತಪಡಿಸಲಾಗುವುದು. ಮೇ ೩೧ರಂದು ಆಯಾ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ಮೂಲಕ ಸಾಗಿ ಮನವಿ ಸಲ್ಲಿಸಲಿದ್ದೇವೆ. ಇದಕ್ಕೆ ಸ್ಪಂದಿಸದೇ ಹೋದಲ್ಲಿ ಜೂ.೨ರಿಂದ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಥವಾ ಆಯಾ ವಸತಿ ಶಾಲೆಗಳ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಚ್ಚರಿಕೆ ನೀಡರು.

Advertisements

“ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಕ್ಕಿಲ್ಲ. ಈಗಾಗಲೇ ವಸತಿ ಶಾಲೆಗಳು ಕ್ರೇಸ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸರ್ಕಾರಿ ನೌಕರರಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯಗಳು ವಸತಿ ಶಾಲೆಗಳ ನೌಕರರಿಗೆ ಸಿಗುತ್ತಿಲ್ಲ. ಹೀಗಾಗಿ ‘ವಸತಿ ಶಿಕ್ಷಣ ನಿರ್ದೇಶನಾಲಯ’ ಎಂದು ಪ್ರತ್ಯೇಕವಾಗಿ ರಚಿಸಿ ರಾಜ್ಯದ ಪ್ರೌಢಶಾಲಾ ಶಿಕ್ಷಣ ಇಲಾಖೆಯಂತೆ, ನ್ಯಾಯೋಚಿತವಾದ ಗೌರವ ಮತ್ತು ಸೌಲಭ್ಯ ಕಲ್ಪಿಸಬೇಕು. ಈಗಾಗಲೇ ಕ್ರೇಸ್ ಅಡಿಯಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಯ ವಸತಿ ಶಾಲೆಗಳು ನಡೆಯುತ್ತಿದ್ದು, ವಸತಿ ಶಿಕ್ಷಣ ನಿರ್ದೇಶನಾಲಯ ಎಂದು ಪ್ರತ್ಯೇಕವಾಗಿ ರಚಿಸದೇ ಹೋದಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಯ ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನು ಸಬಂದಿಸಿದ ಇಲಾಖೆಗಳ ಮುಂದೆ ಬೃಹತ ಪ್ರತಿಭಟನೆ ಮಾಡಲಾಗುವುದು” ಎಂದರು.

“ಹೆಸರಿಗಷ್ಟೇ ಸರ್ಕಾರಿ ನೌಕರಿ. ವಸತಿ ಶಾಲೆಯ ಸಿಬ್ಬಂದಿಗಳಿಗೆ ಸರ್ಕಾರಿ ನೌಕರರ ಯಾವುದೇ ಸೌಲಭ್ಯಗಳಿಲ್ಲ. ಮರಣ ಅಥವಾ ನಿವೃತ್ತಿಯ ಪಿಂಚಿಣಿ ವ್ಯವಸ್ಥೆ ಇಲ್ಲ. ವಸತಿ ಶಾಲೆಗಳ ಸಿಬ್ಬಂದಿಗಳ ವೇತನದಿಂದ ಕಡಿತವಾಗುತ್ತಿರುವ ಮನೆ ಬಾಡಿಗೆ ಭತ್ಯೆಯಿಂದ ವಿನಾಯಿತಿ ನೀಡಬೇಕು. ಅಲ್ಲದೆ ವಸತಿ ಶಾಲಾ ಸಿಬ್ಬಂದಿಗಳ ಮೇಲೆ ವಾರಕ್ಕೆ ಒಂದು ದಿನ ಎಂಒಡಿ ಎಂಬ ಹೆಚ್ಚುವರಿ ಕರ್ತವ್ಯ, ವಸತಿ ಶಾಲೆಯಾಗಿದ್ದರಿಂದ ಮಕ್ಕಳ ಓದು, ಬರಹ, ಆಟೋಟ ಸೇರಿದಂತೆ ಅವರ ಜೊತೆಗೆ ಹೆಚ್ಚಿನ ಸಮಯ ಕಳೆಯಬೇಕಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕಾರ್ಯಭಾರ ನಿರ್ವಹಿಸುವ ಕಾರಣಕ್ಕೆ ಶೇ.೧೦ರಷ್ಟು ವಿಶೇಷ ಭತ್ಯೆ ನೀಡಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ವಿಕಲಚೇತನರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿಯಾಗಬೇಕು: ಗೋವಿಂದಪ್ಪ

ಮನವಿ ಸಮಯದಲ್ಲಿ ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ರಮಾ ಗಲಗಲಿ, ಪದಾಧಿಕಾರಿಗಳು ಮಲ್ಲಯ್ಯ ಇಂಗಳಗಿಮಠ, ಮಂಜುನಾಥ ಮಲ್ಲಪ್ಪನವರ, ಸಲೀಂ ಮಲಿಕ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X