ಕೊಪ್ಪಳ | ಸರ್ಕಾರಿ ಶಾಲೆಗಳ ಉಳಿವಿಗೆ ಜನರಿಂದ ಸಹಿ ಸಂಗ್ರಹ; ಎಐಡಿಎಸ್‌ಒ ಅಭಿಯಾನ

Date:

Advertisements

ರಾಜ್ಯದಲ್ಲಿ ಆರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಒ ಪದಾಧಿಕಾರಿಗಳು ಕೊಪ್ಪಳದ ಹುಲಿಗಿ ಗ್ರಾಮದ ಜಾತ್ರೆಯಲ್ಲಿ ಜನರಿಂದ ಸಹಿ ಸಂಗ್ರಹ ಮಾಡಿದರು.

ಎಐಡಿಎಸ್ಒ ಸಂಘಟನೆಯು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಮ್ಮಿಕೊಂಡಿರುವ 50 ಲಕ್ಷ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಕೊಪ್ಪಳದ ಹುಲಿಗಿಯಲ್ಲಿ ಜಾತ್ರೆಯಲ್ಲಿ ಸಹಿ ಸಂಗ್ರಹಿಸಲಾಯಿತು.

ಎಐಡಿಎಸ್ಒನ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ಹಯ್ಯಾಳಪ್ಪ ಮಾತನಾಡಿ, “ರಾಜ್ಯದಲ್ಲಿ ಕಳೆದ ಬಿಜೆಪಿ ಸರ್ಕಾರ ಎನ್ಇಪಿ 2020ರಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಆದೇಶಿಸಿತು. ಎಐಡಿಎಸ್ಒ ನಾಯಕತ್ವದಡಿ ರಾಜ್ಯದ ವಿದ್ಯಾರ್ಥಿಗಳೆಲ್ಲರೂ ಸೇರಿ 36 ಲಕ್ಷಕ್ಕೂ ಹೆಚ್ಚು ಸಹಿ ಸಂಗ್ರಹಿಸಿ, ಬೃಹತ್ ಆಂದೋಲನ ರೂಪಿಸಿತು. ಕೊನೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಎನ್ಇಪಿ 2020 ರದ್ದುಪಡಿಸಿ, ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಶಾಲೆ, ಕಾಲೇಜು ಹಾಗೂ ವಿವಿಗಳನ್ನು ಮುಚ್ಚಲು ಮುಂದಾಗಿದೆ. ಇದರಿಂದ ಸರ್ಕಾರದ ಮೂಲ ಉದ್ದೇಶ, ಶಿಕ್ಷಣದ ಖಾಸಗೀಕರಣಗೊಳಿಸುವುದು ಎಂಬುದು ಸ್ಪಷ್ಟವಾಗಿದೆ. ಸರ್ಕಾರವು ʼಹಬ್ ಅಂಡ್ ಸ್ಪೋಕ್ʼ ಹೆಸರಿನಲ್ಲಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ” ಎಂದು ದೂರಿದರು.

Advertisements
WhatsApp Image 2025 05 25 at 4.31.13 AM 1

“ರಾಜ್ಯದಲ್ಲಿ 23,436 ಕಿರಿಯ ಪ್ರಾಥಮಿಕ ಶಾಲೆ, 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ 6 ಸಾವಿರ ಶಾಲೆ, 7,821 ಏಕೋಪಾಧ್ಯಾಯ ಶಾಲೆ, 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ದುರಸ್ತಿ ಇಲ್ಲದೆ ಛಾವಣಿ ಸೋರುತ್ತಿದೆ. ರಾಜ್ಯ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಯಾವ ಗಂಭೀರ ಸಮಸ್ಯೆಯನ್ನೂ ಪರಿಹರಸದೇ, ಕಡಿಮೆ ದಾಖಲಾತಿ ಹೆಸರಿನಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ” ಎಂದು ಆರೋಪಿಸಿದರು.

WhatsApp Image 2025 05 25 at 4.31.14 AM

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಅಪಹರಣ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಈ ವೇಳೆ ಕಾರ್ಯಕರ್ತ ಸದಾಶಿವ, ದಿಲೀಪ್, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X