ಬಳ್ಳಾರಿ | ಸಮಸ್ಯೆಯೇ ಸಂಶೋಧನೆಗೆ ಮೂಲ: ಡಾ. ಶಶಿಧರ ಅಭಿಪ್ರಾಯ

Date:

Advertisements

ಸಮಸ್ಯೆಯೇ ಸಂಶೋಧನೆಯ ಬೀಜವಾಗಿದೆ. ಪ್ರತಿಯೊಂದು ಸಮಸ್ಯೆಯೂ ಹೊಸ ಆವಿಷ್ಕಾರಕ್ಕೆ ದಾರಿಯಾಗಬಲ್ಲದು ಎಂದು ಬಳ್ಳಾರಿಯ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಮುನಿರಾಬಾದ್ ಕೇಂದ್ರದ ಅಧ್ಯಕ್ಷ ಡಾ. ಎಸ್ ಎಂ ಶಶಿಧರ ಅಭಿಪ್ರಾಯಪಟ್ಟರು.

ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗ ಮತ್ತು ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಮುನಿರಾಬಾದ್ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಿದ್ದ ಮೂರು ದಿನಗಳ ಸಂಶೋಧನಾ ವಿಧಾನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಎಲೆಕ್ಟ್ರಿಕ್ ವಾಹನಗಳ ಸಂಶೋಧನೆಗೆ ದಾರಿಯಾದವು. ಅಂಗವಿಕಲರಿಗೆ ನಡೆದಾಡುವ ಕಷ್ಟವನ್ನು ಪರಿಹರಿಸಲು ವ್ಹೀಲ್‌ಚೇರ್ ಸಂಶೋಧನೆಯಾಯಿತು. ಪ್ರತಿಯೊಂದು ಆವಿಷ್ಕಾರವೂ ಸಮಸ್ಯೆಯಿಂದ ಹುಟ್ಟುತ್ತದೆ. ಸಂಶೋಧನೆ ಎಂದರೆ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಹಿಡಿಯುವ ಕಲೆಯಾಗಿದೆ. ಸಂಶೋಧನಾ ಮನೋಭಾವವಿಲ್ಲದ ಇಂಜಿನಿಯರ್ ಎಂಜಿನ್ ಇಲ್ಲದ ವಾಹನದಂತೆ” ಎಂದು ಅಭಿಪ್ರಾಯಪಟ್ಟರು.

Advertisements

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿ.ವಿ. ಸಂಘದ ಉಪಾಧ್ಯಕ್ಷ ಜಾನೆಕುಂಟೆ ಬಸವರಾಜ ಮಾತನಾಡಿ, “ಒಬ್ಬ ವಿದ್ಯಾರ್ಥಿಯಾದರೂ ಈ ಕಾರ್ಯಾಗಾರದಿಂದ ಸ್ಫೂರ್ತಿಗೊಂಡು ಸಂಶೋಧನೆಯ ಪಥಕ್ಕೆ ಕಾಲಿಟ್ಟರೆ, ಅದೇ ಈ ಕಾರ್ಯಕ್ರಮದ ಸಾರ್ಥಕತೆ” ಎಂದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ, ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಡಾ. ಕಿಶೋರ್ ಕುಮಾರ್ ಕಮ್ಮಾರ ಮಾತನಾಡಿ, “ವಿದ್ಯಾರ್ಥಿಗಳ ಪ್ರಾಜೆಕ್ಟ್‌ಗಳು ಕೇವಲ ಅಂಕಗಳಿಗಾಗಿ ಇರಬಾರದು; ಅವು ಭವಿಷ್ಯದ ತಂತ್ರಜ್ಞಾನದ ತಳಹದಿಯಾಗಬೇಕು” ಎಂದರು.

ಇದನ್ನೂ ಓದಿ: ಬಳ್ಳಾರಿ | ಬೆಂಬಲಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕ ಡಾ. ವೀರಭದ್ರಪ್ಪ ಆಲಗೂರು ಮಾತನಾಡಿ, “ಇಂತಹ ಕಾರ್ಯಾಗಾರಗಳು ಯುವ ಸಂಶೋಧಕರಿಗೆ ದಾರಿ ದೀಪವಾಗುತ್ತವೆ. ಸಂಶೋಧನೆಯ ಅವಕಾಶಗಳು ಎಲ್ಲೆಡೆ ಇವೆ, ಆದರೆ ಅವುಗಳನ್ನು ಗುರುತಿಸಲು ಆವಿಷ್ಕಾರಕ ದೃಷ್ಟಿಯ ಅಗತ್ಯವಿದೆ” ಎಂದರು.

ಪ್ರಾಂಶುಪಾಲ ಡಾ. ಹನುಮಂತರೆಡ್ಡಿ, ಉಪ ಪ್ರಾಂಶುಪಾಲರು, ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಸೋನೋಳಿ, ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಕೋರಿ ನಾಗರಾಜ್, ಕಾರ್ಯಕ್ರಮದ ಸಂಯೋಜಕ ಡಾ. ಚಂದ್ರಗೌಡ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X