ವಿಜಯನಗರ ಜಿಲ್ಲೆ ಹೊಸಪೇಟೆಯ 58 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ತೀವ್ರ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳಿಗೆ ಸೂಚನೆ ಹೊರಡಿಸಿದೆ.
ಜಿಲ್ಲೆಯಲ್ಲಿ 47 ಪಿಎಚ್‌ಸಿಗಳು, 7 ಸಿಎಚ್‌ಸಿಗಳು, ಮೂರು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದೆ. ಕೊರೊನಾ ಪೀಡಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ ಹಾಗೂ ಕ್ರಮಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್ ಆರ್ ಶಂಕರ್ ನಾಯ್ಡು ತಿಳಿಸಿದರು.
ತಾಲೂಕಿನ ಕಮಲಾಪುರದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲು ಬಂದಿದ್ದ ಶಾಸಕ ಅವರು ಡಿಎಚ್ ಒ ಅವರಿಗೆ ಕರೆ ಮಾಡಿ ಕೊರೊನಾ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.
ಇದನ್ನೂ ಓದಿ: ವಿಜಯನಗರ | ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾದ ನವದಂಪತಿ
‘ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಶಂಕಿತ ಕೊರೊನಾ ಪೀಡಿತೆಗೆ ಉತ್ತಮ ಆರೈಕೆ ನೀಡಿ’ ಎಂದು ಶಾಸಕ ಎಚ್ ಆರ್ ಗವಿಯಪ್ಪ ಸೂಚಿಸಿದರು.