ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆರ್.ದಾದಾ ಸಾಹೇಬ್ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.
ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ಜಮಾಯಿಸಿದ ಪೊಲೀಸ್ ಸಿಬ್ಬಂದಿ, ಸಹೋದ್ಯೋಗಿಯ ಸಾವಿಗೆ ಕಂಬನಿ ಮಿಡಿದರು.