ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿ ವರ್ತನೆಯು ನಮ್ಮ ಕೌಟುಂಬಿಕ ಮೌಲ್ಯಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಮೇಲಿನ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ಹೊರಹಾಕಿದ್ದೇನೆ. ಇಂದಿನಿಂದ, ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ” ಎಂದು ಬರೆದಿದ್ದಾರೆ.
ಅವರೊಂದಿಗೆ ಸಂಬಂಧ ಹೊಂದಿರುವವರು ತಮ್ಮ ಸ್ವಂತ ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಲಾಲು ಪ್ರಸಾದ್ ಹೇಳಿದ್ದಾರೆ.
ತೇಜ್ ಪ್ರತಾಪ್ ಯಾದವ್ ಮಹಿಳೆಯೊಬ್ಬರೊಂದಿಗೆ 12 ವರ್ಷಗಳ ಸಂಬಂಧ ಬಯಲಾದ ಕಾರಣ ಪಕ್ಷದಿಂದ ಉಚ್ಚಾಟಿಸಲಾಗಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!