ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್‌ಸ್ಟಾಗ್ರಾಮ್ ಪೇಜ್ ಮತ್ತು 1 ಫೇಸ್‌ಬುಕ್ ಪೇಜನ್ನು ಮಂಗಳೂರು ನಗರ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ವಿವಿಧ ಧರ್ಮ ಮತ್ತು ವರ್ಗಗಳ ಜನರ ನಡುವೆ ದ್ವೇಷ ಹುಟ್ಟುಹಾಕಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿದ್ದ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿದ್ದ ಅಕೌಂಟ್‌ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.
vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಮ್ ಪುಟಗಳ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. _dj_bharath_2008 ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. karaavali_official ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಆಶಿಕ್ ಮೈಕಾಲʼ ಎಂಬ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಮಂಗಳೂರು | ಮಳೆ ಅವಾಂತರ; ಮೂರು ಲಕ್ಷ ಮೌಲ್ಯದ ದಿನಸಿ ನೀರುಪಾಲು
ಈ ಪುಟಗಳ ಮಾಹಿತಿ ಹಾಗೂ ಅವುಗಳನ್ನು ನಿಷ್ಕ್ರಿಯಗೊಳಿಸುವ ಬಗ್ಗೆ ಸಂಬಂಧಪಟ್ಟ ಕಾನೂನು ಜಾರಿ ಏಜೆನ್ಸಿಗಳಿಗೆ ಪತ್ರ ವ್ಯವಹಾರ ನಡೆಸಿದ ನಂತರ, ಆ ಏಜೆನ್ಸಿಗಳು ಈ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪುಟಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸದಂತೆ ರದ್ದುಗೊಳಿಸಲಾಗಿದೆ.