ಕ್ಷುಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಜಗಳದಲ್ಲಿ ಓರ್ವ ಯುವಕನಿಗೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಮಾಣಿಕನಗರದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಷೇಕ್ ಮಹ್ಮದ್ ಆರೀಫ್ ಎಂದು ಹೇಳಲಾಗಿದೆ. ಗೆಳೆಯರ ನಡುವೆ ಹಳೇ ವೈಷಮ್ಯವಿತ್ತು ಎನ್ನಲಾಗಿದ್ದು, ಅದೇ ಕೊಲೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಮಹ್ಮದ ಗೌಸ್ ಮತ್ತು ಎಂ ಡಿ ಮುಜಾಹಿದ್ ಎಂಬ ವಿದ್ಯಾರ್ಥಿಗಳು ಸೇರಿ ಜಗಳವಾಡಿಕೊಂಡು ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅರೀಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಂಜಾ ಸೇವನೆ ಮೂವರು ಪೊಲೀಸ್ ವಶಕ್ಕೆ
ನೇತಾಜಿನಗರ ಪಿಎಸ್ಐ ಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ವಶಕ್ಕೆ ಪಡೆದು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.