ಉಡುಪಿ | ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌

1005546850

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ. ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Advertisements

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಗಾಳಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮೇ 26 ಸೋಮವಾರ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X