ಅಧಿವೇಶನ | ಅನ್ನಭಾಗ್ಯ ಚರ್ಚೆ ಧಿಕ್ಕರಿಸಿ ಸದನದಿಂದ ಹೊರನಡೆದ ಬಿಜೆಪಿ ಸದಸ್ಯರು

Date:

Advertisements
  • ಅನ್ನಭಾಗ್ಯ ಯೋಜನೆಗೆ ಕೇಂದ್ರದ ಅಸಹಕಾರಕ್ಕೆ ಸಿದ್ದರಾಮಯ್ಯ ಕಿಡಿ
  • ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯರು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುತ್ತ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೇಗೆ ಸಹಕಾರ ಕೊಟ್ಟಿಲ್ಲ ಎಂದು ವಿವರಿಸುತ್ತಿದ್ದರು. ಬಿಜೆಪಿ ಸದಸ್ಯರು ಏಕಾಏಕಿ ಎದ್ದು ನಿಂತು ಸಿದ್ದರಾಮಯ್ಯ ಅವರನ್ನು ವಿರೋಧಿಸಿ, ಗಲಾಟೆ ಮಾಡಿ ಕೊನೆಗೆ ಸದನದಿಂದ ಹೊರ ನಡೆದರು.

ಆರ್‌ ಅಶೋಕ್‌ ಅವರು ಸಿಎಂ ಉತ್ತರಕ್ಕೆ ಮಧ್ಯ ಪ್ರವೇಶಿಸಿ ಪ್ರತಿಕ್ರಿಯಿಸಿ, “ಕಾಂಗ್ರೆಸ್‌ ಸರ್ಕಾರಕ್ಕೆ ನಾಚಿಕೆಯಾಗಬೇಕು. ಕೇಂದ್ರ ಸರ್ಕಾರ ಅನ್ನಭಾಗ್ಯ ಘೋಷಿಸಿಲ್ಲ. ನೀವು ಘೋಷಿಸಿದ್ದೀರಿ. ಅಕ್ಕಿ ಖರೀದಿಸಿ ಕೊಡಿ. ಇಲ್ಲಸಲ್ಲದಂತೆ ಕೇಂದ್ರದ ಮೇಲೆ ಆರೋಪ ಮಾಡಲು ಹೋಗಬೇಡಿ” ಎಂದರು.

ಅಷ್ಟೊತ್ತಿಗೆ ಕಾಂಗ್ರೆಸ್‌ ಸದಸ್ಯರು ಕೂಡ ಎದ್ದು ನಿಂತು ಬಿಜೆಪಿ ಸದಸ್ಯರ ವಿರುದ್ಧ ಹರಿಹಾಯ್ದರು. ಮಾತಿಗೆ ಮಾತು ಬೆಳೆದು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ಮಾಡಿ ಕೂಗಾಡಿದರು. ಅಷ್ಟೊತ್ತಿಗೆ ಬಿಜೆಪಿ ಸದಸ್ಯರು ಕಾಂಗ್ರೆಸ್‌ ವಿರುದ್ಧ ಧಿಕ್ಕಾರ ಕೂಗಿ ಸದನದಿಂದ ಹೊರನಡೆದರು.

Advertisements

ಡಿಸಿಎಂ ಡಿಕೆ ಶಿವಕುಮಾರ್‌ ಎದ್ದು ನಿಂತು, “ಬಡವರ ಬಗ್ಗೆ ನಿಜವಾದ ಬಿಜೆಪಿ ಕಾಳಜಿ ಈಗ ಸಾಬೀತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಬಗ್ಗೆ ಹೇಳುತ್ತಿದ್ದರೆ ಬಡವರ ಮೇಲಿನ ಅಸೂಯೆಯಿಂದ ಚರ್ಚೆ ಮಾಡದೇ ಎದ್ದು ಹೋದರು. ಇವರಲ್ಲಿ ಎಷ್ಟು ಹೊಟ್ಟೆ ಊರಿ ಇದೆ ಎಂಬುದು ಇವರ ನಡೆಯಿಂದ ಆರ್ಥವಾಗುತ್ತದೆ” ಎಂದರು.

ಬಿಜೆಪಿ ಸದಸ್ಯರು

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಮುಂದುವರಿದು, “ನಮ್ಮ ರಾಜ್ಯಕ್ಕೆ ಅಕ್ಕಿ ಅಲಾಟ್‌ ಮಾಡಲು ಅವಕಾಶ ಇದ್ದರೂ ಕೇಂದ್ರ ಸರ್ಕಾರ ಕೊಡಲಿಲ್ಲ. ಅನ್ನ ಭಾಗ್ಯ ಯೋಜನೆಯಿಂದ ಅವರ ಹೊಟ್ಟೆಯಲ್ಲಿ ಸಂಕಟವಾಗುತ್ತಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರ ಎಂಬುದು ಮತ್ತೆ ಸಾಬೀತಾಗಿದೆ. ಬಿಜೆಪಿಯವರು ಅಕ್ಕಿ ಕಡಿತಗೊಳಿಸಿದ್ದಕ್ಕೆ ನಮ್ಮ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ 10 ಕೆಜಿ ಅಕ್ಕಿ ಘೋಷಿಸಿದ್ದಾರೆ. ಜಾತಿ, ಧರ್ಮ ಮೀರಿ ಎಲ್ಲರಿಗೂ ಘೋಷಿಸಿದ್ದೇವೆ. ಇದು ನಮ್ಮ ಸಾಮಾಜಿಕ ಕಾಳಜಿ” ಎಂದು ತಿಳಿಸಿದರು.

“ಬಿಜೆಪಿಯವರು ನಮಗೆ ಸಹಕಾರ ಕೊಡಲಿ, ಕೊಡದೇ ಇರಲಿ; ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಎಲ್ಲ ಗ್ಯಾರಂಟಿಗಳನ್ನು ನಾವು ಜಾರಿಗೆ ತಂದೇ ತರುತ್ತೇವೆ. ನಮ್ಮ ಮಾತಿಗೆ ತಪ್ಪಿ ನಡೆದರೆ ನಾವು ಮುಂದಿನ ಚುನಾವಣೆಯಲ್ಲಿ ಜನರ ಹತ್ತಿರ ಹೋಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X