ಕೆಎಸ್‌ಡಿಎಲ್ ಮೇಲೆ ಟೀಕೆ | ಯಾರಿಂದಲೂ ಕನ್ನಡಾಭಿಮಾನ ಕಲಿಯುವ ಅಗತ್ಯವಿಲ್ಲ: ಸಚಿವ ಎಂ ಬಿ ಪಾಟೀಲ್

Date:

Advertisements

ಕೆಎಸ್‌ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಕಿಡಿಕಾರಿದರು.

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್‌ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ” ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳಲ್ಲಿ ಕೆಎಸ್‌ಡಿಎಲ್ ಸಾರ್ವಕಾಲಿಕ ಉತ್ಪಾದನೆ, ವಹಿವಾಟು ಮತ್ತು ಲಾಭ ಮಾಡಿದೆ. ಇದನ್ನು ನಾನು ನನ್ನ ಸ್ವಂತ ವ್ಯಾಪಾರಕ್ಕಿಂತ ಹೆಚ್ಚು ಆದ್ಯತೆ ಕೊಟ್ಟು, ದಕ್ಷತೆ ಹೆಚ್ಚಿಸಿದ್ದೇನೆ. ಸಂಸ್ಥೆ ಸೊರಗಿದ್ದಾಗ ಏನೂ ಮಾತನಾಡದವರ ಕೆಂಗಣ್ಣು ಈಗ ಅದರ ಮೇಲಿದೆ” ಎಂದು ಹರಿಹಾಯ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

“ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಾಡಿಕೊಂಡಿರುವುದರ ಹಿಂದೆ ವಾಣಿಜ್ಯಿಕ ಉದ್ದೇಶವಿದೆ. ನಾನು ಇದನ್ನು ಸ್ಪಷ್ಟಪಡಿಸಿದ ಮೇಲೆ ಕೆಲವು ಕನ್ನಡಪರ ಸಂಘಟನೆಗಳ ನಾಯಕರು, ಈ ವಿಚಾರ ತಮಗೆ ಗೊತ್ತಿರಲಿಲ್ಲ; ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನನಗೆ ಹೇಳಿದ್ದಾರೆ” ಎಂದರು.

“ಕಳೆದ ಎರಡು ವರ್ಷಗಳಲ್ಲಿ 23 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಡಿಶ್ ವಾಶರ್ ಮತ್ತು ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ನಾವು ವ್ಯಾಪಾರವನ್ನು ವ್ಯಾಪಾರವಾಗಿಯೇ ನೋಡಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ” ಎಂದು ಹೇಳಿದರು.

“ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುತ್ತಿದ್ದರು. ಅದನ್ನು ನಾವು ಮಟ್ಟ ಹಾಕಿದೆವು. ಈಗಲೂ ಕೆಲವರು ಇದನ್ನು ನಕಲು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X