ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಆಕ್ರೋಶಗೊಂಡು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಆಸ್ಪತ್ರೆ ಆಂಬುಲೆನ್ಸ್ ಧ್ವಂಸಗೊಳಿಸಿದ ಘಟನೆ ಮಸ್ಕಿಯಲ್ಲಿ ಜರುಗಿದೆ.
ಸಿದ್ದಮ್ಮ( 23)ಸಾವಿಗೀಡಾದ ಬಾಣಂತಿ ಎಂದು ಗುರುತಿಸಲಾಗಿದೆ.ನಗರದ ಖಾಸಗಿ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಿಸಲಾಗಿತ್ತು.ವೈದ್ಯರ ನಿರ್ಲಕ್ಷ್ಯ ಕಾರಣಕ್ಕೆ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನ ಜಮಾವಣೆಗೊಂಡು ಘಟನೆ ನಡೆದಿದೆ ಎನ್ನಲಾಗಿದೆ.
ಆಸ್ಪತ್ರೆ ಸ್ತ್ರೀರೋಗ ತಜ್ಞರಾದ ಡಾ.ಸೌಮ್ಯ ಗುಂಡಳ್ಳಿ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕ್ಷುಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ; ಯುವಕನ ಕೊಲೆ
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ,ಆರೋಗ್ಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ.
