ಹುಬ್ಬಳ್ಳಿ | ವಾಯವ್ಯ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ 20 ಲಕ್ಷ ರೂ. ದಂಡ ವಸೂಲಿ

Date:

Advertisements

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನವರಿ ಮತ್ತು ಜೂನ್ ನಡುವೆ ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 21,034 ಪ್ರಯಾಣಿಕರಿಂದ 20.19 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ ಎಂದು ಸಾರಿಗೆ ನಿಗಮ ಹೇಳಿದೆ.

ಹುಬ್ಬಳ್ಳಿಯಲ್ಲಿ ವಾಕರಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಹುದ್ದಾರ ಅವರು ತನಿಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. “ವಾಕರಸಾ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ 9 ಸಾರಿಗೆ ವಿಭಾಗಗಳು ಹಾಗೂ ಕೇಂದ್ರ ಕಚೇರಿಯ ತನಿಖಾ ಸಿಬ್ಬಂದಿಗಳು ಜನವರಿಯಿಂದ ಜೂನ್ ಅವಧಿಯಲ್ಲಿ 1,00,778 ತನಿಖೆಗಳನ್ನು ನಡೆಸಿದ್ದಾರೆ. ಟಿಕೆಟ್ ರಹಿತ ಪ್ರಯಾಣ ಮಾಡಿದ 21,034 ಪ್ರಯಾಣಿಕರಿಂದ 20,19,459 ರೂ. ದಂಡ ವಸೂಲಿ ಮಾಡಿದ್ದಾರೆ” ಎಂದು ತಿಳಿಸಿದರು.

“ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವುದು. ಚಾಲನಾ ಸಿಬ್ಬಂದಿಗಳಲ್ಲಿ ಶಿಸ್ತು ಮೂಡಿಸುವ ನಿಟ್ಟಿನಲ್ಲಿ ತನಿಖಾಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ತನಿಖಾಧಿಕಾರಿಗಳು ಸಾರಿಗೆ ಆದಾಯ ಸೋರಿಕೆ ತಡೆಗಟ್ಟಲು ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದರು.

Advertisements

ಸಭೆಯಲ್ಲಿ ಉಪ ಮುಖ್ಯ ಸಂಚಾರ ಸ್ಥಾಪಕ ಎಚ್. ರಾಮನಗೌಡರ ಮಾತನಾಡಿ, “ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರು ಸೇರಿದಂತೆ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ನಿಗಧಿತ ನಿಲುಗಡೆಗಳಲ್ಲಿ ಕಡ್ಡಾಯವಾಗಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ-ಹತ್ತಿಸಿಕೊಂಡು ಹೋಗಬೇಕು. ಪ್ರಯಾಣಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸಬೇಕು. ಸುರಕ್ಷಿತ ಕ್ರಮಗಳ ಪಾಲನೆಯ ಬಗ್ಗೆ ಚಾಲನಾ ಸಿಬ್ಬಂದಿಗೆ ಜಾಗೃತಿ ಮೂಡಿಸಬೇಕು” ಎಂದರು.

ಉತ್ತಮ ಸಾಧನೆ ಮಾಡಿದ ತನಿಖಾ ಸಿಬ್ಬಂದಿ ಬಸವಂತಪ್ಪ ತಳ್ಳಳ್ಳಿ, ಈಶಪ್ಪ ಪಟ್ಟಣಶೆಟ್ಟಿ, ಭೀಮಪ್ಪ ದಾನಪ್ಪಗೋಳ, ಅಮರನಾಥ ಕುಂಟೋಜಿ, ರಾಜೇಶ ಮನಸೂರ ಹಾಗೂ ಗೋವಿಂದ ಲಮಾಣಿ ಹಾಗೂ ಚಾಲಕರಾದ ಹುಸೇನ್ ಸಾಬ್ ಮುಲ್ಲಾನವರ ಮತ್ತು ಅಶೋಕ ಶಿವಶರಣ ಅವರಿಗೆ ನಗದು ಪುರಸ್ಕಾರ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X