ಸಿವಿಲ್ ಪ್ರಕರಣ | ರಾಜಿ ಸಂಧಾನ ಕಡ್ಡಾಯ, ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ: ಎಚ್.ಕೆ ಪಾಟೀಲ್

Date:

Advertisements

ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆಗೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿರುತ್ತವೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕಗಟ್ಟಲೇ ಕಾಯುವ / ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾದ ದಿಟ್ಟಹೆಜ್ಜೆಯನ್ನಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ತಿದ್ದುಪಡಿಯನ್ನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ ಮಾಡಿದೆ. ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ. ಈ ಐತಿಹಾಸಿಕ ತಿದ್ದುಪಡಿ ರಾಷ್ಟ್ರದಲ್ಲಿಯೇ ಮೊದಲು. ತಕ್ಷಣದಿಂದ ಈ ತಿದ್ದುಪಡಿ ಜಾರಿಗೆ ಬರಲಿದೆ” ಎಂದರು.

“ನಮ್ಮ ಶಾಸಕಾಂಗ ಮಾಡಿದ ಈ ತಿದ್ದುಪಡಿಯ ಮುಖಾಂತರ ಪ್ರತಿಯೊಂದು ಸಿವಿಲ್ ಪ್ರಕರಣಗಳು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾದ ಪ್ರಯತ್ನ ಮಾಡಬೇಕು. ಎರಡು ತಿಂಗಳೊಳಗಾಗಿ ರಾಜಿ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಾಗ, ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂಬ ಶಾಸನಾತ್ಮಕ ಅವಕಾಶ ದೊರೆತಿರುವುದು ಕಕ್ಷಿದಾರನ ಪಾಲಿಗೆ ತೆರೆದ ಭಾಗ್ಯದ ಬಾಗಿಲು” ಎಂದು ಸಚಿವರು ವಿವರಿಸಿದರು.

Advertisements

“ನ್ಯಾಯಾಲಯಗಳ ಕಲಾಪಗಳಲ್ಲಿ ವಿಳಂಬ ನಿರಾಕರಿಸುವ, ಚರಿತ್ರಾರ್ಹ ಸುಧಾರಣೆಗೆ ಶಾಸನಾತ್ಮಕ ಅಂಕುಶ ಹೊಂದಿರುವ ಈ ತಿದ್ದುಪಡಿ ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ, ತಾರ್ಕಿಕ ಅಂತ್ಯ ಕಾಣುವುದಕ್ಕೆ ಸುನಿಶ್ಚಿತಗೊಳಿಸುವ ಶಾಸನ ಜಾರಿಗೆ ಬಂದಿದೆ. ಈ ಪುರೋಗಾಮಿ ಪ್ರಗತಿಯ ಜೊತೆ-ಜೊತೆಗೆ ಈ ಕಾನೂನು ನ್ಯಾಯಾಲಯಗಳಲ್ಲಿ ಆಗುವ ವಿಳಂಬಕ್ಕೆ ಇತಿಶ್ರೀ ಹಾಡಲಿದೆ. ಇನ್ನು ಮುಂದೆ ನ್ಯಾಯಾಲಯಗಳಲ್ಲಿ, ವಿಳಂಬವಿಲ್ಲದೇ ಪ್ರಕರಣಗಳು ಇತ್ಯರ್ಥವಾಗಲು ಶಾಸನ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆ.ಆರ್.ಪೇಟೆ ದಲಿತ ಯುವಕ ಜಯಕುಮಾರ್ ಕೇಸ್‌ನಲ್ಲಿ ಪೊಲೀಸರು ಕುರುಡಾಗಿದ್ದು ಅಕ್ಷಮ್ಯ

“ನ್ಯಾಯಾಲಯದಲ್ಲಿ ಪ್ರಕರಣ ದಾಖಲಾದ ದಿನದಂದು ಅಥವಾ ಮೊದಲ ವಿಚಾರಣೆಯ ದಿನದಂದು ಅಂತಿಮ ತೀರ್ಪು / ಆದೇಶದ ದಿನಾಂಕ ನಿರ್ಣಯವಾಗುವ ಅತ್ಯಂತ ಪರಿಣಾಮಕಾರಿ ಮಹತ್ವದ ಶ್ರೇಷ್ಠವಾದ ನ್ಯಾಯಾಂಗದ ಕಾರ್ಯ ನಿರ್ವಹಣೆಗೆ ಈ ತಿದ್ದುಪಡಿ ಇಂಬು ನೀಡಲಿದೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ 17.12.2024 ರಂದು ವಿಧಾನ ಸಭೆಯಲ್ಲಿ 18.12.2024 ವಿಧಾನ ಪರಿಷತ್ತಿನಲ್ಲಿ ಈ ಕಾನೂನು ಅಂಗೀಕರಿಸಲಾಗಿತ್ತು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಈ ವಿಧೇಯಕವನ್ನು ಸಂವಿಧಾನದ ಅನುಚ್ಛೇದ 200 ಮತ್ತು 254 ರಡಿಯಲ್ಲಿ ಘನತೆವೆತ್ತ ರಾಷ್ಟ್ರಪತಿಯವರ ಅಂಕಿತಕ್ಕೆ ಕಾಯ್ದಿರಿಸಿದ್ದರು. ಈ ಕಾನೂನಿಗೆ ರಾಷ್ಟ್ರಪತಿಯವರು ದಿನಾಂಕ: 19.05.2024 ರಂದು ತಮ್ಮ ಅಂಕಿತ ಹಾಕಿದ್ದಾರೆ” ಎಂದು ಹೇಳಿದರು.

“ಲಿಖಿತ ಹೇಳಿಕೆ, ಸಾಕ್ಷ್ಯ ಸಂಗ್ರಹ ಎಲ್ಲದಕ್ಕೂ ಕಾಲಮಿತಿ ನಿಗದಿಪಡಿಸಲು ಶಾಸನ ಅವಕಾಶ ಕಲ್ಪಿಸಿದೆ. ಯಾವುದೇ ಹಂತದಲ್ಲಿ ಒಂದು ತಿಂಗಳೊಳಗಾಗಿ ಕೇವಲ 3 ಮುಂದೂಡಿಕೆ ಅಥವಾ 3 ದಿನಾಂಕಗಳ ಅವಕಾಶ ಮಾತ್ರ ಕಲ್ಪಿಸಲಾಗುವುದು. ಯಾವುದೇ ಹಂತದಲ್ಲಿ ಅರ್ಜಿದಾರ-ಪ್ರತಿವಾದಿ ಈ ಅವಕಾಶದಲ್ಲಿ ಸಲ್ಲಿಸದಿದ್ದರೆ, ಅಂಥವರ ಹೇಳಿಕೆಗಳನ್ನು ಶೂನ್ಯವೆಂದು ಪರಿಗಣಿಸಲು ಅವಕಾಶ ನೀಡಲಾಗಿದೆ” ಎಂದು ಸಚಿವರು ತಿಳಿಸಿದರು.

“ಈ ಕಾನೂನಿನಲ್ಲಿ ಪ್ರಕರಣ ನಿರ್ವಹಣೆಯನ್ನು ಪುನರ್ ವ್ಯಾಖ್ಯಾನ ಮಾಡಲಾಗಿದೆ. ಸಾಕ್ಷ್ಯಗಳ ವಿಚಾರಣೆಗಳನ್ನು ನಿಗದಿತ ದಿನಾಂಕದಂದು ಕೈಗೊಳ್ಳಲು ಮತ್ತು ದೈನಂದಿನ ಅಥವಾ ಸಾಪ್ತಾಹಿಕ ಆಧಾರದಲ್ಲಿ ಈ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವುದರಿಂದ ಯಾವುದೇ ಪ್ರಕರಣ ಅನಿರ್ದಿಷ್ಟಕಾಲ ವಿಳಂಬಕ್ಕೆ ಕಾರಣವಾಗುವುದಿಲ್ಲ. ಆಗದಂತೆ ಸುನಿಶ್ಚಿತಗೊಳಿಸುವ ಜನಪರ ಕಾನೂನು ಅಸ್ತಿತ್ವಕ್ಕೆ ತರಲಾಗಿದೆ” ಎಂದರು.

“ನ್ಯಾಯದಾನ ವ್ಯವಸ್ಥೆಯನ್ನು ಸಂಪೂರ್ಣವಾಗಿ, ಸುಧಾರಣೆಗೆ ಈ ಕಾನೂನು ಅವಕಾಶ ಕಲ್ಪಿಸಿದೆ. ರಾಜ್ಯದ ಕಕ್ಷಿದಾರರ ನ್ಯಾಯಾಲಯಕ್ಕೆ ವೃಥಾ ಅಲೆದಾಟ ತಪ್ಪಿಸಿ, ಆರ್ಥಿಕವಾಗಿಕೈಗೆಟಕುವ ರೀತಿಯಲ್ಲಿ ತ್ವರಿತ ನ್ಯಾಯದಾನ ವ್ಯವಸ್ಥೆಗೆ ಒಂದು ನಿರ್ವಹಣಾ ವ್ಯವಸ್ಥೆಯನ್ನು ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಇಲಾಖೆ ಕಲ್ಪಿಸಿ, ರೂಪಿಸಿ, ಅನುಷ್ಠಾನಗೊಳಿಸಿದೆ” ಎಂದು ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X