ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಮೇ. 26 ರಂದು ಸೋಮವಾರ ಸಂಜೆ ರಾಷ್ಟ್ರಿಯ ಹೆದ್ದಾರಿ 66ರ ಕಾಪು ಪೊಲಿಪು ಮಸೀದಿ ಬಳಿ ಸಂಭವಿಸಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಓವರ್ ಟೆಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೆ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.