ಕುದುರೆ ವ್ಯಾಪಾರದ ಬಗ್ಗೆ ಮಾತಾಡಿ ಬುದ್ವಂತ್ರೆ : ನೆಟ್ಟಿಗರ ವಿರುದ್ಧ ಉಪೇಂದ್ರ ವ್ಯಂಗ್ಯ

Date:

Advertisements
  • ನೆಟ್ಟಿಗರ ಕಾಮೆಂಟ್‌ಗಳಿಗೆ ವಾರೆವ್ಹಾ ಎಂದ ಉಪ್ಪಿ
  • ಕುದುರೆ ವ್ಯಾಪಾರದ ಬಗ್ಗೆ ಕಾಮೆಂಟ್ ಮಾಡಿ

ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ನಟ, ರಾಜಕಾರಣಿ ಉಪೇಂದ್ರ ಟ್ವಿಟರ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಮತ ಎಣಿಕೆಗೆ ಎರಡು ದಿನ ಬೇಕೆ ಎಂದು ಪ್ರಶ್ನಿಸಿದ್ದ ಉಪೇಂದ್ರ, ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿ ನೆಟ್ಟಿಗರ ಕಾಲೆಳೆದಿದ್ದಾರೆ.

ಮೇ 10ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಈ ಕುರಿತಾಗಿ ಎರಡು ದಿನಗಳ ಕಾಲ ಏಕೆ ಮತ ಎಣಿಕೆ ತಡವಾಗುತ್ತಿದೆ ಎಂದು ಉಪೇಂದ್ರ ಪ್ರಶ್ನಿಸಿದ್ದರು.

“ಮತ ಎಣಿಕೆಗೆ ಎರಡು ದಿನ ಬೇಕೆ?! ಏಕೆಂದು ಬಲ್ಲವರು ತಿಳಿಸುತ್ತೀರಾ?” ಎಂದು ಉಪೇಂದ್ರ ಟ್ವೀಟ್ ಮಾಡಿದ್ದ ಬೆನ್ನಲ್ಲೇ ನೆಟ್ಟಿಗರು ಉಪೇಂದ್ರ ಅವರ ಪೋಸ್ಟ್‌ಗೆ ಮುಗಿಬಿದ್ದರು.

Advertisements

“ಸ್ವಲ್ಪ ಅರ್ಥ ಮಾಡ್ಕೊಳಿ ಸ್ವಾಮಿ. ಮತಯಂತ್ರಗಳನ್ನು ಮತಗಟ್ಟೆಗಳಿಂದ ಎಣಿಕೆ ಕೇಂದ್ರಗಳಿಗೆ ಕೊಂಡೊಯ್ಯಬೇಕು, ಅದರ ಜೊತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳು ಇತ್ಯಾದಿ ಇರುತ್ತೆ ಅಲ್ವಾ? ಇಷ್ಟೆಲ್ಲಾ ಮಾಡೋಕ್ಕೆ 2 ದಿನ ಬೇಕಲ್ವಾ ಸ್ವಾಮಿ?” ಎನ್ನುವ ಕಾಮೆಂಟ್‌ ಹಿಡಿದು ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.

ಕೆಲವು ಕಾಮೆಂಟ್‌ಗಳಂತೂ ‘ಅತಿ ಬುದ್ಧಿವಂತರಾಗುವುದು ಅಪಾಯ, ಇದು ಸಿನಿಮಾ ಅಲ್ಲ’ ಎನ್ನುವ ಮೂಲಕ ಉಪೇಂದ್ರರ ಕಾಲೆಳೆದರು.

ಉಪೇಂದ್ರ ಅವರ ಟ್ವೀಟ್‌ಗೆ ಬಂದ ಕಾಮೆಂಟ್‌ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಡಿಜಿಟಲ್ ವೋಟಿಂಗ್ ಅಲ್ವಾ? ಮತ ಎಣಿಕೆಗೆ 2 ದಿನಾ ಬೇಕಾ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು?! ವಾರೆ ವಾಹ್” ಎಂದು ನೆಟ್ಟಿಗರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

“ವ್ಯಾಪಾರೀ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು” ಎಂದು ವ್ಯಂಗ್ಯವಾಗಿ ಅಣಕವಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X