ಐಪಿಎಲ್ 18ನೇ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯ ಇಂದು(ಮೇ 27) ಲಖನೌನ ಏಕಾನ ಮೈದಾನದಲ್ಲಿ ನಡೆಯಲಿದ್ದು, ಆರ್‌ಸಿಬಿ ತಂಡ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.
ಎಲ್‌ಎಸ್‌ಜಿ ಈ ಪಂದ್ಯವನ್ನು ಪ್ರತಿಷ್ಠೆಗಾಗಿ ಆಡಿದರೆ, ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ಅಗ್ರಸ್ಥಾನಕ್ಕೆ ಪೈಪೋಟಿ ನಡೆಸಬೇಕಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಲಿದೆ.
ಎಲ್‌ಎಸ್‌ಜಿ ಹಾಗೂ ಆರ್‌ಸಿಬಿ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಇತಿಹಾಸ ಬರೆಯುವ ಕನಸಿನಲ್ಲಿ ಆರ್‌ಸಿಬಿ ಇದ್ದು, ಲೀಗ್ ಹಂತದ ಏಳು ಪಂದ್ಯಗಳನ್ನು ತವರಿನಾಚೆ ಗೆದ್ದ ದಾಖಲೆಯನ್ನು ಬರೆಯಲಿದೆ.
ಆರ್‌ಸಿಬಿ ತಂಡದ ಪರ ಆರಂಭಿಕರಾಗಿ ಕಾಣಿಸಿಕೊಳ್ಳುವ ವಿರಾಟ್ ಕೊಹ್ಲಿ ಭರವಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಉತ್ತಮ ಇನಿಂಗ್ಸ್ ಕಟ್ಟುವ ವಿಶ್ವಾಸವನ್ನು ಮೂಡಿಸಿದ್ದಾರೆ. ವಿರಾಟ್‌ಗೆ ಫಿಲ್ ಸಾಲ್ಟ್ ಉತ್ತಮ ಜೊತೆ ನೀಡಬಲ್ಲರು. ವಿರಾಟ್ ಈ ಪಂದ್ಯದಲ್ಲಿ 24 ರನ್ ಬಾರಿಸಿದರೆ ಆರ್‌ಸಿಬಿ ಪರ 9 ಸಾವಿರ ರನ್ ಕಲೆ ಹಾಕಿದ ಸಾಧನೆ ಮಾಡಲಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್ ಅಗರ್‌ವಾಲ್, ಜಿತೇಶ್ ಶರ್ಮಾ, ರೊಮಾರಿಯೋ ಶೆಫರ್ಡ್, ರಜತ್ ಪಾಟಿದಾರ್ ತಮ್ಮ ಉತ್ತಮ ಆಟವನ್ನು ಆಡಬೇಕಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ಟೀಮ್ ಡೇವಿಡ್ ಆಡುವುದು ಅನುಮಾನವಾಗಿದೆ. ಇವರ ಬದಲಿಗೆ ಜಾಕಬ್ ಬೆತೆಲ್ ಅಥವಾ ಲಿಯಾಮ್ ಲಿವಿಂಗ್‌ಸ್ಟೋನ್ ಅವಕಾಶ ಸಿಗುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ಇಂಗ್ಲೆಂಡ್ ಪ್ರವಾಸಕ್ಕೆ ಭಾರತದ ಅಂಡರ್ 19 ತಂಡ ಪ್ರಕಟ; ವೈಭವ್ ಸೂರ್ಯವಂಶಿ, ಆಯುಷ್‌ಗೆ ಸ್ಥಾನ
ಆರ್‌ಸಿಬಿ ತಂಡದ ಬೌಲಿಂಗ್ ಬಲಾಢ್ಯವಾಗಿದೆ. ಟೀಮ್ ಇಂಡಿಯಾದ ಪರ ಜೋಶ್ ಹ್ಯಾಜಲ್‌ವುಡ್ ತಂಡಕ್ಕೆ ಆಗಮಿಸಿರುವುದು ತಂಡಕ್ಕೆ ಬಲ ತಂದಿದೆ. ಭುವನೇಶ್ವರ್ ಕುಮಾರ್, ಯಶ್ ದಯಾಳ್ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಇನ್ನು ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ ಶಿಸ್ತು ಬದ್ಧ ದಾಳಿ ನಡೆಸಬೇಕಿದೆ.
ಲಖನೌ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ಬಿರುಸಿನ ಬ್ಯಾಟ್ ಮಾಡಬೇಕಿದೆ. ಐಡೇನ್ ಮಾರ್ಕ್ರಾಮ್, ಮಿಚ್ ಮಾರ್ಷ್, ರಿಷಭ್ ಪಂತ್, ನಿಕೋಲಸ್ ಪೂರನ್ ದೊಡ್ಡ ಇನಿಂಗ್ಸ್ ಕಟ್ಟಬೇಕಿದೆ. ರವಿ ಬಿಷ್ಣೋಯಿ, ದಿಗ್ವೇಶ್ ರಾಠಿ ಹಾಗೂ ವೇಗದ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಬೇಕಿದೆ.
ಪ್ಲೇ ಆಫ್ ಲೆಕ್ಕಾಚಾರ
ಆರ್‌ಸಿಬಿ ತಂಡ ಲಖನೌ ತಂಡ ಸೋಲಿಸಿದರೆ: ಕ್ವಾಲಿಫೈಯರ್-1: ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ಎಲಿಮಿನೇಟರ್: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್
ಲಖನೌ ಸೂಪರ್ ಜೈಂಟ್ಸ್ ಗೆದ್ದರೆ: ಕ್ವಾಲಿಫೈಯರ್-1: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್
ಎಲಿಮಿನೇಟರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
ಉಭಯ ತಂಡಗಳ ಪಂದ್ಯವಾಡುವ 11ರ ಬಳಗ
ಆರ್‌ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ , ಮಯಾಂಕ್ ಅಗರವಾಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್ , ಯಶ್ ದಯಾಳ್, ಬ್ಲೆಸ್ಸಿಂಗ್ ಮುಜರಬಾನಿ, ಸುಯಾಶ್ ಶರ್ಮಾ
ಎಲ್‌ಎಸ್‌ಜಿ: ಮಿಚೆಲ್ ಮಾರ್ಷ್ , ಆರ್ಯನ್ ಜುಯಲ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಆಯುಷ್ ಬದೋನಿ, ಅಬ್ದುಲ್ ಸಮದ್ , ಶಾರ್ದೂಲ್ ಠಾಕೂರ್/ಆಕಾಶ್ ಸಿಂಗ್, ಆಕಾಶ್ ದೀಪ್, ಆವೇಶ್ ಖಾನ್ , ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ವಿಲಿಯಂ ಓ’ಆರ್.
ಪಂದ್ಯದ ಸಮಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಜಿಯೋ ಹಾಟ್ ಸ್ಟಾರ್ ಹಾಗೂ ಸ್ಟಾರ್ ಸ್ಪೋರ್ಟ್ಸ್