ಕುಣಿಗಲ್ ರಸ್ತೆಯ ಕೆಳ ಸೇತುವೆ ಬಂದ್ : ಕಾಮಗಾರಿ ಸ್ಥಗಿತಗೊಳಿಸಲು ಒತ್ತಾಯ

Date:

Advertisements

ತುಮಕೂರು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಣಿಗಲ್ ರಸ್ತೆಯಲ್ಲಿರುವ ರೈಲ್ವೆ ಅಂಡರ್ ಪಾಸ್ ದುರಸ್ಥಿ ಕಾಮಗಾರಿ ಮಾಡುವ ಉದ್ದೇಶದಿಂದ ಮಳೆಗಾಲದಲ್ಲಿ ಒಂದು ತಿಂಗಳ ಕಾಲ ಈ ಮಾರ್ಗ ಬಂದ್ ಮಾಡುವ ಜಿಲ್ಲಾಡಳಿತ ನಿರ್ಧಾರದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಲಿದೆ. ಕೂಡಲೇ ಜಿಲ್ಲಾಡಳಿತ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.

ಕುಣಿಗಲ್ ಅಂಡರ್ ಪಾಸ್ ದುರಸ್ಥಿ ಕಾಮಗಾರಿಯಿಂದಾಗಿ ಔಟರ್ ರಿಂಗ್ ರೋಡ್‌ನಲ್ಲಿ ತುಂಬಾ ವಾಹನಗಳು ಸಂಚಾರಿಸುವ ಕಾರಣ ಮಕ್ಕಳನ್ನು ಶಾಲೆಗೆ ಬಿಡಲು, ವಯೋವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತುಂಬಾ ಸಮಸ್ಯೆಯಾಗುತ್ತಿದೆ. ಜಿಲ್ಲಾಡಳಿತ ಮುಂದಾಲೋಚನೆ ಇಲ್ಲದೆ ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಸಲುವಾಗಿ ಶಿರಾ ಗೇಟ್ ರಸ್ತೆ ಬಂದ್ ಮಾಡಿದ್ದಾಗ ಸಂಚಾರ ಮಾಡಲು ಜನರು ಪರದಾಡಿದ್ದು ಮಾಸುವ ಮುನ್ನವೇ ಸಾರ್ವಜನಿಕರ ಅಭಿಪ್ರಾಯ ಪಡೆಯದೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಶಾಲೆ, ಕಾಲೇಜುಗಳು ಆರಂಭವಾಗಿದ್ದು ಮಕ್ಕಳನ್ನು ಶಾಲೆಗೆ ಬಿಡಲು ತೊಂದರೆಯಾಗುತ್ತದೆ. ಇಂತಹ ಕಾಮಗಾರಿಗಳನ್ನು ಶಾಲೆ, ಕಾಲೇಜುಗಳು ರಜೆ ಇರುವಾಗ ಮತ್ತು ಮಳೆ ಇಲ್ಲದ ಸಂದರ್ಭದಲ್ಲಿ ಮಾಡಿದರೆ ಸಾರ್ವಜನಿಕರಿಗೆ ಅನುಕೂಲಕರವಾಗಿರುತ್ತದೆ ಎಂದರು.

Advertisements
img 20250501 wa00084641945590644986442

ಈ ಹಿನ್ನೆಲೆಯಲ್ಲಿ ಸುಮಾರ 50 ಲಕ್ಷ ರೂ. ವೆಚ್ಚದಲ್ಲಿ ಅಂಡರ್‌ಪಾಸ್ ರಸ್ತೆ, ಚರಂಡಿ ವ್ಯವಸ್ಥೆ, ಫುಟ್‌ಪಾತ್ ಹಾಗೂ ರೈಲಿಂಗ್ಸ್ ನವೀಕರಣ ಮಾಡುವುದು, ಗ್ರಾಂಟಿಗ್ಸ್ ಅಳವಡಿಸುವುದು, ರಸ್ತೆ ದುರಸ್ಥಿ, ತಡೆಗೋಡೆ ದುರಸ್ಥಿ, ಚರಂಡಿ ದುರಸ್ಥಿ ಕಾಮಗಾರಿ, ಆರ್‌ಸಿಸಿ ರೈಲಿಂಗ್ಸ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗವನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ಕಾಮಗಾರಿಯನ್ನು ದಸರ ರಜೆ, ಮತ್ತು ಬೇಸಿಗೆ ರಜೆ ಸಮಯದಲ್ಲಿ ಮಾಡಬೇಕು. ಮಳೆಗಾಲದಲ್ಲಿ ಇಂತಹ ಕಾಮಗಾರಿ ಮಾಡಬಾರದು ಎಂದರು.

ಒಂದು ತಿಂಗಳಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿದ್ದಾರೆ. ಅದು ಸಾಧ್ಯವೇ ಎಂಬುದನ್ನು ಜಿಲ್ಲಾಡಳಿತ ಸ್ಪಸ್ಟಪಡಿಸಬೇಕು. ಕುಣಿಗಲ್, ಹೆಬ್ಬೂರು, ನಾಗವಲ್ಲಿ, ಗೂಳೂರು ಸೆರಿದಂತೆ ತುಮಕೂರು ನಗರದ ವಿವಿಧ ಬಡಾವಣೆಯ ನಾಗರಿಕರಿಗೆ ಮಳೆಗಾಲದಲ್ಲಿ ಈ ಕಾಮಾಗಾರಿ ಮಾಡುವುದರಿಂದ ತೀವ್ರ ತೊಂದರೆಯಾಗುತ್ತದೆ. 

ಅಂಡರ್ ಪಾಸ್ ಕಾಮಗಾರಿಯಿಂದಾಗಿ ಒಂದು ತಿಂಗಳ ಕಾಲ ಭಾನುವಾರ ಬೆಳಿಗ್ಗೆಯಿಂದ ಈ ಅಂಡರ್‌ಪಾಸ್ ಬಂದ್ ಮಾಡಲಾಗಿದೆ. ಕುಣಿಗಲ್ ಕಡೆಗೆ ಹೋಗುವ ಮತ್ತು ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಅದರೆ ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಪಡೆಯದೆ ಏಕಮುಖವಾಗಿ ಈ ರೀತಿ ನಿರ್ಧಾರ ಮಾಡುವುದು ಸಾರ್ವಜನಿಕ ಹಿತದೃಷ್ಠಿಯಿಂದ ಒಳ್ಳೆಯದಲ್ಲ.ಕೂಡಲೇ ಈ ಭಾಗದ ಸಾರ್ವಜನಿಕರ ಸಭೆ ನಡೆಸಿ ಅಭಿಪ್ರಾಯ ಪಡೆದು ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

Download Eedina App Android / iOS

X