ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ಸಮೀಪ ನಡೆದಿದೆ.
ತಾಲ್ಲೂಕಿನ ಸಂಕನೂರು ಗ್ರಾಮದ ಹಣಮಂತ (18) ಮೃತ ಯುವಕ ಎಂದು ತಿಳಿದು ಬಂದಿದೆ.
ಟಿಪ್ಪರ್ ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸುಮಾರು ಹತ್ತು ಅಡಿ ದೂರ ಎಗರಿ ಬಿದ್ದು ಸಾವನ್ನಪ್ಪಿದ್ದಾನೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕಲಬುರಗಿ | ಎಂಎಲ್ಸಿ ಎನ್.ರವಿಕುಮಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ