ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಅರಸುನಗರ ಸಮೀಪ ರಸ್ತೆಯ ಮೇಲೆ ಸಂಗ್ರಹವಾಗಿದ್ದ ನೀರನ್ನು ಗಮನಿಸದೆ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೃತ ಯುವಕರು ಬೆಂಗಳೂರಿನ ಅಭಿಷೇಕ್(27) ಹಾಗೂ ಶರತ್(28) ಮೃತಪಟ್ಟಿದ್ದು, ರಾಜಶೇಖರ್ ಮತ್ತು ಸಂದೀಪ್ ಗಾಯಗೊಂಡಿದ್ದಾರೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ನೀರು ಸಂಗ್ರಹವಾಗಿತ್ತು. ಬೆಂಗಳೂರಿನಿಂದ ನಾಲ್ವರು ಯುವಕರು ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುವಾಗ ರಸ್ತೆಯ ಮೇಲೆ ನಿಂತಿದ್ದ ನೀರಿನ ಮೇಲೆ ಹಾದು ಹೋಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿದ್ದೀರಾ?ಹಾಸನ l ಭಾರಿ ಮಳೆ: ವಾಹನ ಸಂಚಾರ ಜಾಗೃತ ಅಗತ್ಯ; ಅಧಿಕಾರಿಗಳು
ಗಾಯಾಳುಗಳನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.